ಹನಿಮೂನ್‌ ಹಂತಕಿ ಸೋನಮ್‌ ಜಾಮೀನು ರದ್ದು ಅರ್ಜಿ ವಜಾ

ನವದೆಹಲಿ: ಹನಿಮೂನ್‌ಗೆ ತೆರಳಿದ್ದ ವೇಳೆ ಪತಿ ರಾಜಾ ರಘುವಂಶಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್‌ ರಘುವಂಶಿಗೆ ಮೇಘಾಲಯ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಮೇಘಾಲಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಅಲ್ಲದೇ, ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಮೇಘಾಲಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 9ಕ್ಕೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್‌ ಹಾಗೂ ಶೀಲ್‌ ನಾಗು ಅವರಿದ್ದ ಪೀಠವು, ಹೈಕೋರ್ಟ್‌ ನೀಡಿದ್ದ ಜಾಮೀನು ಆದೇಶಕ್ಕೆ ತಡೆ ನೀಡಲು … Continue reading ಹನಿಮೂನ್‌ ಹಂತಕಿ ಸೋನಮ್‌ ಜಾಮೀನು ರದ್ದು ಅರ್ಜಿ ವಜಾ