ಪಿಎಂ, ಸಿಎಂ ಪದಚ್ಯುತಿ: ಮಹತ್ವದ ಮಸೂದೆ ಮಂಡಿಸಿದ ಅಮಿತ್ ಶಾ

0
71

ನವದೆಹಲಿ: ಕ್ರಿಮಿನಲ್ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಧಾನಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸೇರಿದಂತೆ ಚುನಾಯಿತ ಪ್ರತಿನಿಧಿಗಳನ್ನು ಸತತ 30 ದಿನಗಳವರೆಗೆ ಬಂಧನದಲ್ಲಿದ್ದರೆ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕುವ ಪ್ರಸ್ತಾಪವನ್ನು ಹೊಂದಿರುವ ಮಸೂದೆ ಸೇರಿದಂತೆ ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು.

ಗಂಭೀರ ಅಪರಾಧಗಳಿಗಾಗಿ ಸಚಿವರನ್ನು ಬಂಧಿಸಿ ದೀರ್ಘಕಾಲ ಜೈಲಿನಲ್ಲಿಟ್ಟರೆ, ಅದು ಸಾಂವಿಧಾನಿಕ ನೈತಿಕತೆ, ಉತ್ತಮ ಆಡಳಿತ ಮತ್ತು ಸಾರ್ವಜನಿಕ ನಂಬಿಕೆಗೆ ಧಕ್ಕೆ ತರುತ್ತದೆ. ಗಂಭೀರ ಕ್ರಿಮಿನಲ್ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಧಾನಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸೇರಿದಂತೆ ಚುನಾಯಿತ ಪ್ರತಿನಿಧಿಗಳನ್ನು ಸತತ 30 ದಿನಗಳವರೆಗೆ ಬಂಧನದಲ್ಲಿದ್ದರೆ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕುವ ಪ್ರಸ್ತಾಪವನ್ನು ಹೊಂದಿರುವ ಮಸೂದೆಯನ್ನು ಅಮಿತ್ ಶಾ ಮಂಡಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ-2025, ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ಪದಚ್ಯುತಗೊಳಿಸುವ ಮಸೂದೆ, ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡಣೆ (ತಿದ್ದುಪಡಿ) ಮಸೂದೆ- 2025. ಕ್ರಿಮಿನಲ್ ಕೇಸ್​​ನಲ್ಲಿ ಪ್ರಧಾನಿಗಳು, ಕೇಂದ್ರ ಸಚಿವರು, ಸಿಎಂಗಳು, ರಾಜ್ಯಗಳ ಸಚಿವರು ಬಂಧನಕ್ಕೆ ಒಳಗಾದರೆ ಅವರನ್ನು ಆ ಹುದ್ದೆಯಿಂದ ವಜಾ ಮಾಡುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ.

ಹೊಸ ಮಸೂದೆಯಿಂದ ಪಿಎಂ, ಸಿಎಂ, ಸಚಿವರ ವಜಾಕ್ಕೆ ಅವಕಾಶವಿರಲಿದೆ. ಅವರು 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಗಾದರೆ ಹುದ್ದೆಯಿಂದ ವಜಾಗೊಳಿಸಲಾಗುವುದು. ಯಾವುದೇ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ರಾಜ್ಯಗಳ ಸಚಿವರನ್ನು ವಶಕ್ಕೆ ಪಡೆದರೆ ಅಥವಾ ಬಂಧನಕ್ಕೆ ಒಳಗಾದರೆ ಅವರನ್ನು 30 ದಿನದೊಳಗೆ ಹುದ್ದೆಯಿಂದ ವಜಾಗೊಳಿಸಲು ಅವಕಾಶವಿದೆ. ಅಥವಾ ಅವರು 30 ದಿನದೊಳಗೆ ರಾಜೀನಾಮೆ ನೀಡುವುದು ಕಡ್ಡಾಯವಾಗಲಿದೆ.

ವೇಣುಗೋಪಾಲ್ ಅಮಿತ್ ಶಾ ಮಾತಿನ ಜಟಾಪಟಿ : ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ಪದಚ್ಯುತಗೊಳಿಸುವ ಮಸೂದೆ ಕುರಿತಂತೆ ಮಾತನಾಡುವ ವೇಳೆ ಅಮಿತ್ ಶಾ ಗುಜರಾತ್‌ನಲ್ಲಿ ಗೃಹ ಸಚಿವರು ಆಗಿದ್ದಾಗ ಆಗಿದ್ದ ಬಂಧನ ವಿಚಾರವನ್ನು ವೇಣುಗೋಪಾಲ್ ಪ್ರಸ್ತಾಪಿಸುತ್ತಿದಂತೆ ಆಕ್ರೋಶಗೊಂಡ ಷಾ ಪ್ರತಿಕ್ರಿಯಿಸಿ ಬಂಧನಕ್ಕೂ ಮೊದಲೇ ನೈತಿಕತೆ ಹಿನ್ನೆಲೆಯಲ್ಲಿ ಬಂಧನಕ್ಕು ಮುನ್ನವೇ ಗುಜರಾತ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ತಿಳಿಸಿದರು. ಗಂಭೀರ ಆರೋಪಗಳನ್ನು ಎದುರಿಸುತ್ತಿರುವಾಗಲೂ ನಾವು ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸುವುದನ್ನು ಮುಂದುವರಿಸುವಷ್ಟು ನಾಚಿಕೆ ಇಲ್ಲದವರಾಗಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ

ಆಳುವ ರಾಜ್ಯಗಳು ಅಸ್ಥಿರ: . ಈ ಮಸೂದೆಗೆ ವಿರೋಧ ಪಕ್ಷಗಳು ಈ ಶಾಸನವನ್ನು ಕಠಿಣ ಎಂದು ಕರೆದಿದ್ದು, ಸಚಿವರು ಮತ್ತು ಮುಖ್ಯಮಂತ್ರಿಗಳನ್ನು ಅನಿಯಂತ್ರಿತವಾಗಿ ಬಂಧಿಸುವ ಮೂಲಕ ವಿರೋಧ ಪಕ್ಷಗಳು ಆಳುವ ರಾಜ್ಯಗಳನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರವು ಇದನ್ನು ಬಳಸಿಕೊಳ್ಳುತ್ತದೆ ಎಂದಿವೆ.

ಜಂಟಿ ಸಂಸದೀಯ ಸಮಿತಿಗೆ ಮಸೂದೆ: ನಿಯಮದಂತೆ ಮಸೂದೆಗಳನ್ನು ಜಂಟಿ ಸಮಿತಿಯ ಪರಿಶೀಲನೆಗೆ ಕಳುಹಿಸಬೇಕೆಂದು ಷಾ ಪ್ರಸ್ತಾಪಿಸುತ್ತಿದ್ದಂತೆ, ವಿರೋಧ ಪಕ್ಷದ ನಾಯಕರು ಮಸೂದೆಗಳ ಪ್ರತಿಗಳನ್ನು ಹರಿದು ಗೃಹ ಸಚಿವರ ಮೇಲೆ ಎಸೆದಿದ್ದಾರೆ ಎಂದು ತಿಳಿದುಬಂದಿದೆ. ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಆದರೆ, ಈ ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಕಳುಹಿಸಲಾಗುವುದು ಎಂದು ಅಮಿತ್ ಶಾ ತಿಳಿಸಿದ್ದಾರೆ.

Previous articleವಿಜಯಪುರ: ಆಸ್ಟ್ರೇಲಿಯಾಕ್ಕೆ ʻಇಂಡಿʼಯ ರಸಭರಿತ ಲಿಂಬೆ
Next articleGST: ದೀಪಾವಳಿ ಹೊತ್ತಿಗೆ ಕಾರು, ಎಸಿ, ದಿನಬಳಕೆ ವಸ್ತುಗಳು ಅಗ್ಗ!

LEAVE A REPLY

Please enter your comment!
Please enter your name here