Home Advertisement
Home ಸುದ್ದಿ ದೇಶ ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

0
93

ಖ್ಯಾತ ಗಾಯಕಿ, ಪದ್ಮವಿಭೂಷಣ ಆಶಾ ಭೋಸ್ಲೆ (92) ಅವರು ಮುಂಬೈನಲ್ಲಿಂದು ಕೊನೆಯುಸಿರೆಳೆದಿದ್ದಾರೆ.

ಹೃದಯಾಘಾತದಿಂದ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದ ಆಶಾ ಭೋಸ್ಲೆ ಅವರು ಚಿಕಿತ್ಸೆ ಫಲಿಸದೇ ಭಾನುವಾರ ಮುಂಜಾನೆ ನಿಧನರಾದರು.

ಪಾಪ್, ಗಜಲ್, ಶಾಸ್ತ್ರೀಯ ಸಂಗೀತದಲ್ಲಿ ಖ್ಯಾತಿ ಪಡೆದಿದ್ದ ಅವರು ಹಿಂದಿಯಷ್ಟೇ ಅಲ್ಲದೆ, ಕನ್ನಡ ಸೇರಿದಂತೆ 20 ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದರು.

ಅತಿ ಹೆಚ್ಚು ಹಾಡುಗಳನ್ನು ಹಾಡಿದ ಗಾಯಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅವರು ಪದ್ಮವಿಭೂಷಣ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳಿಗೆ ಭಾಜನರಾಗಿದ್ದಾರೆ.