ನವದೆಹಲಿ: ಸರಕಾರಿ ಸಂಸ್ಥೆಗಳನ್ನು ಆರ್‌ಎಸ್‌ಎಸ್ ವಶಪಡಿಸಿಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.
ಲೋಕಸಭೆಯಲ್ಲಿ SIR ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ವಿರುದ್ಧ ಹರಿಹಾಯ್ದರು. ಆರ್‌ಎಸ್‌ಎಸ್ ಸಮಾನತೆಯಲ್ಲಿ ನಂಬಿಕೆ ಇಡುವುದಿಲ್ಲ, ಶ್ರೇಣಿಕರಣದಲ್ಲಿ ನಂಬಿಕೆ ಇಡುತ್ತಾರೆ. ಮಹಾತ್ಮ ಗಾಂಧಿಯವರ ಹತ್ಯೆಯ ನಂತರ, ಭಾರತದ ಸಾಂಸ್ಥಿಕ ಚೌಕಟ್ಟನ್ನು ಸಂಪೂರ್ಣವಾಗಿ ಸ್ವಾಧೀನಪಡಿಸಿಕೊಳ್ಳುವುದು ಆರ್‌ಎಸ್‌ಎಸ್‌ನ ಯೋಜನೆಯಾಗಿದೆ ಎಂದರು.
EC, ED, CBI ಮತ್ತು ಇತರ ಕೇಂದ್ರ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಗುರಿಯನ್ನು RSS ಹೊಂದಿದೆ. ನಮ್ಮ ದೇಶದ ಚುನಾವಣಾ ವ್ಯವಸ್ಥೆಯನ್ನು ನೇರವಾಗಿ ನಿಯಂತ್ರಿಸುವ ಚುನಾವಣಾ ಆಯೋಗ ಕೂಡ ಕೇಂದ್ರ ಸರಕಾರದ ವಶದಲ್ಲಿದೆ ಎಂದು ಅವರು ನೇರವಾಗಿ ಆರೋಪಿಸಿದರು.
ಅಧಿಕಾರದಲ್ಲಿರುವವರೊಂದಿಗೆ ಒಪ್ಪಂದವನ್ನು ಮಾಡಿಕೊಂಡು ಚುನಾವಣಾ ಆಯೋಗ ಚುನಾವಣೆಗಳನ್ನು ಹೇಗೆ ರೂಪಿಸುತ್ತಿದೆ ಎನ್ನುವುದಕ್ಕೆ ನಮ್ಮ ಬಳಿ ಪುರಾವೆಗಳಿದ್ದು, ಅವುಗಳನ್ನು ಒದಗಿಸಿದ್ದೇನೆ ಎಂದರು.









