ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎನ್. ವಾಸು ಅವರನ್ನು ವಿಶೇಷ ತನಿಖಾ ದಳ(ಎಸ್‌ಐಟಿ) ಮಂಗಳವಾರ ಬಂಧಿಸಿದೆ.
ದೇವಸ್ಥಾನ ಮಂಡಳಿ ಅಧ್ಯಕ್ಷರಾಗುವದಕ್ಕೂ ಮುಂಚಿತವಾಗಿ ವಾಸು ಅವರು ಎರಡು ಬಾರಿ ಟಿಡಿಬಿ ಆಯುಕ್ತರಾಗಿ ಕೆಲಸ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇವಸ್ಥಾನದ ಮುಖ್ಯದ್ವಾರ ಮತ್ತು ದ್ವಾರಪಾಲ ಮೂರ್ತಿಗಳ ಚಿನ್ನ ನಾಪತ್ತೆಯಾಗುವಲ್ಲಿ ವಾಸು ಪ್ರಮುಖ ಪಾತ್ರ ವಹಿಸಿದ್ದಾರೆನ್ನಲಾಗಿದೆ. ಬಂಧಿತ ಆರೋಪಿಗೆ ರಾಜ್ಯ ಸರ್ಕಾರ ಪ್ರಮುಖ ನಾಯಕರ ಜತೆ ನಿಕಟ ಸಂಪರ್ಕ ಹೊಂದಿದ್ದಾರೆ.























