SK Home Ad
Home ಸುದ್ದಿ ದೇಶ ತೆಲಂಗಾಣದ ಮುಖ್ಯ ಕಾರ್ಯದರ್ಶಿಯಾಗಿ ಸಂಜಯ್ ಜಾಜು ನೇಮಕ

ತೆಲಂಗಾಣದ ಮುಖ್ಯ ಕಾರ್ಯದರ್ಶಿಯಾಗಿ ಸಂಜಯ್ ಜಾಜು ನೇಮಕ

0
45

ಹೈದರಾಬಾದ್: 1992ರ ಬ್ಯಾಚ್‌ನ ಹಿರಿಯ ಐಎಎಸ್ ಅಧಿಕಾರಿ ಸಂಜಯ್ ಜಾಜು ಅವರನ್ನು ತೆಲಂಗಾಣದ ನೂತನ ಮುಖ್ಯ ಕಾರ್ಯದರ್ಶಿ (Chief Secretary)ಯಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿರುವ ಕೆ. ರಾಮಕೃಷ್ಣ ರಾವ್ ಅವರು ಜೂನ್ 30, 2026ರಂದು ನಿವೃತ್ತಿಯಾಗಲಿದ್ದು, ಅವರ ಸ್ಥಾನವನ್ನು ಸಂಜಯ್ ಜಾಜು ಅಲಂಕರಿಸಲಿದ್ದಾರೆ.

ಈ ಕುರಿತು ತೆಲಂಗಾಣ ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ. ಕಳೆದ ಕೆಲವು ದಿನಗಳಿಂದಲೇ ಸಂಜಯ್ ಜಾಜು ಅವರನ್ನು ರಾಜ್ಯದ ಉನ್ನತ ಆಡಳಿತಾತ್ಮಕ ಹುದ್ದೆಗೆ ನೇಮಕ ಮಾಡುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಇದೀಗ ಅದಕ್ಕೆ ಅಧಿಕೃತ ಮುದ್ರೆ ಬಿದ್ದಿದೆ.

ಇದನ್ನೂ ಓದಿ: ISSF ವಿಶ್ವ ಜೂನಿಯರ್ ಶೂಟಿಂಗ್: ಹುಬ್ಬಳ್ಳಿಯ ಐಶ್ವರ್ಯಾಗೆ ಬೆಳ್ಳಿ ಪದಕ

ಈಶಾನ್ಯ ಪ್ರದೇಶದ ಅಭಿವೃದ್ಧಿ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂಜಯ್ ಜಾಜು ಅವರನ್ನು ಸ್ವದೇಶ ಕೇಡರ್‌ಗೆ ಮರಳಿಸಲು ಕೇಂದ್ರ ಸರ್ಕಾರದ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಅವರ ನೇಮಕಾತಿ ಬಹುತೇಕ ಖಚಿತವಾಗಿತ್ತು.

ಸಂಜಯ್ ಜಾಜು ಅವರಿಗೆ ರಾಜ್ಯ ಮತ್ತು ಕೇಂದ್ರ ಆಡಳಿತದಲ್ಲಿ ದೀರ್ಘ ಅನುಭವವಿದೆ. ಸಂಯುಕ್ತ ಆಂಧ್ರಪ್ರದೇಶದಲ್ಲಿ ಐಟಿ ಮತ್ತು ಸಂವಹನ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಅವರು, ರಾಜ್ಯ ವಿಭಜನೆಯ ನಂತರ ತೆಲಂಗಾಣ ಕೇಡರ್‌ಗೆ ನಿಯೋಜನೆಗೊಂಡಿದ್ದರು. 2014ರಲ್ಲಿ ಕೇಂದ್ರ ಸೇವೆಗೆ ತೆರಳಿದ್ದ ಅವರು, ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಅಭಿವೃದ್ಧಿ ನಿಗಮ (NHIDCL) ನಿರ್ದೇಶಕರಾಗಿ, ಬಳಿಕ ಕೇಂದ್ರ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಯಾಗಿ ಹಾಗೂ 2024ರಿಂದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನೂ ಓದಿ: ತಾಂತ್ರಿಕ ನಿರ್ವಹಣೆ ಹಿನ್ನೆಲೆ: ಇಂದು ಇಡೀ ದಿನ KEA ಹೆಲ್ಪ್‌ಲೈನ್ ಬಂದ್

ಅನುಭವ ಹಾಗೂ ಆಡಳಿತಾತ್ಮಕ ಪರಿಣತಿಯ ಮೂಲಕ ಸಂಜಯ್ ಜಾಜು ತೆಲಂಗಾಣ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.