Home Advertisement
Home ಸುದ್ದಿ ದೇಶ NCP ಅಧ್ಯಕ್ಷ ಶರದ್ ಪವಾರ್ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲು

NCP ಅಧ್ಯಕ್ಷ ಶರದ್ ಪವಾರ್ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲು

0
119

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (NCP) ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಶರದ್ ಪವಾರ್ (Sharad Pawar) ಅವರನ್ನು ನಿಯಮಿತ ಆರೋಗ್ಯ ತಪಾಸಣೆಗಾಗಿ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. 85 ವರ್ಷದ ಹಿರಿಯ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಇತ್ತೀಚಿನ ತಿಂಗಳುಗಳಲ್ಲಿ ಆರೋಗ್ಯ ಸಮಸ್ಯೆಗಳ ಹಿನ್ನೆಲೆ ಪವಾರ್ ಅವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದು, ಫೆಬ್ರವರಿ ಆರಂಭದಲ್ಲೂ ಎದೆ ಸೋಂಕು ಮತ್ತು ನಿರ್ಜಲೀಕರಣ ಸಮಸ್ಯೆಯಿಂದಾಗಿ ಪುಣೆಯಲ್ಲಿ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈಗ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಇತ್ತೀಚೆಗೆ ವ್ಹೀಲ್‌ಚೇರ್‌ನಲ್ಲಿ ಕುಳಿತು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದೂ ಗಮನಾರ್ಹವಾಗಿದೆ. ಆರೋಗ್ಯ ಸಮಸ್ಯೆಗಳ ನಡುವೆಯೂ ಅವರು ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದು, ಪಕ್ಷದ ಕಾರ್ಯಚಟುವಟಿಕೆಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಪಕ್ಷದ ಮೂಲಗಳ ಪ್ರಕಾರ, ಇದು ನಿಯಮಿತ ತಪಾಸಣೆ ಮಾತ್ರವಾಗಿದ್ದು, ಮುಂದಿನ ಕೆಲವು ದಿನಗಳಲ್ಲಿ ಪವಾರ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಅವರ ಆರೋಗ್ಯ ಕುರಿತು ಯಾವುದೇ ಆತಂಕ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪವಾರ್ ಅವರ ಆರೋಗ್ಯದ ಬಗ್ಗೆ ತಿಳಿದ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಶೀಘ್ರ ಚೇತರಿಕೆಗಾಗಿ ಹಾರೈಸುತ್ತಿದ್ದಾರೆ.