ನವದೆಹಲಿ: ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಸಾವಿಗೀಡಾಗಿದಾರೆ. ಇದರಲ್ಲಿ ಈ ಘಟನೆಯಿಂದ 20 ಜನರು ಗಾಯಗೊಂಡಿದ್ದಾರೆ. ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಹಾಗೇ ಈ ಘಟನೆಯಿಂದ ಕುಟುಂಬಸ್ಥರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಅಲ್ಲದೆ, ರಾಷ್ಟ್ರದ ಗಮನ ಸೆಳೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಕಾರೈಕುಡಿಯಿಂದ ಸುಮಾರು 15 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ಸುಗಳು ಸಂಪೂರ್ಣ ಜಜ್ಜಿಹೊಗಿದೆ. ಪ್ರಯಾಣಿಕರ ಪೈಕಿ ಎಂಟು ಮಂದಿ ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದಂತೆ ಒಟ್ಟು 11 ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 20 ಮಂದಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ.
ಘಟನೆ ಕುರಿತು ತಿಳಿದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ‘ಎಕ್ಸ್’ (X) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “ತಮಿಳುನಾಡಿನ ಶಿವಗಂಗಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಜನರು ಸಾವಿಗೀಡಾದ ಘಟನೆ ತೀವ್ರ ದುಃಖ ತಂದಿದೆ. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪರಿಹಾರ ಘೋಷಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿಗಳನ್ನು ನೀಡಲಾಗುವುದು.
ಜೊತೆಗೆ, ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರವನ್ನು ವಿತರಿಸುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.
ಈ ದುರಂತದಿಂದ ಶಿವಗಂಗಾ ಜಿಲ್ಲೆಯಲ್ಲಿ ಶೋಕದ ವಾತಾವರಣ ಮನೆಮಾಡಿದೆ. ಸ್ಥಳೀಯ ಆಡಳಿತವು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದು, ರಸ್ತೆ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
























