SK Home Ad
Home ಸುದ್ದಿ ದೇಶ ಅಯೋಧ್ಯೆ ರಾಮ ಮಂದಿರಕ್ಕೆ CEO ನೇಮಕ: ಅರ್ಜಿ ಆಹ್ವಾನಿಸಿದ ಟ್ರಸ್ಟ್

ಅಯೋಧ್ಯೆ ರಾಮ ಮಂದಿರಕ್ಕೆ CEO ನೇಮಕ: ಅರ್ಜಿ ಆಹ್ವಾನಿಸಿದ ಟ್ರಸ್ಟ್

0
80

ರಾಮ ಮಂದಿರಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೇಮಕ; ಅರ್ಜಿ ಆಹ್ವಾನಿಸಿದ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್

ನವದೆಹಲಿ : ಅಯೋಧ್ಯೆಯ ಶ್ರೀರಾಮ ಮಂದಿರದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಹತ್ವದ ಹೆಜ್ಜೆ ಇಟ್ಟಿದೆ. ಶ್ರೀ ರಾಮ ಜನ್ಮಭೂಮಿ ಮಂದಿರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Chief Executive Officer – CEO) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 18, 2026 ಸಂಜೆ 4 ಗಂಟೆ ಕೊನೆಯ ದಿನಾಂಕ ಎಂದು ಟ್ರಸ್ಟ್ ಪ್ರಕಟಿಸಿದೆ. ಟ್ರಸ್ಟ್ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ, ಆಯ್ಕೆಯಾಗುವ ಸಿಇಒ ರಾಮ ಮಂದಿರದ ದೈನಂದಿನ ಆಡಳಿತ, ಭಕ್ತರ ಸೇವೆ, ಹಣಕಾಸು ನಿರ್ವಹಣೆ, ಸಿಬ್ಬಂದಿ ವ್ಯವಸ್ಥೆ ಹಾಗೂ ದೇವಸ್ಥಾನದ ಸಮಗ್ರ ಕಾರ್ಯನಿರ್ವಹಣೆಯ ಹೊಣೆಗಾರಿಕೆಯನ್ನು ವಹಿಸಲಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಗೋಹತ್ಯೆ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

ದೇವಸ್ಥಾನದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ವೃತ್ತಿಪರ ನಿರ್ವಹಣೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ನೇಮಕಾತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ. ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳ ಆಡಳಿತಾತ್ಮಕ ಅಥವಾ ವ್ಯವಸ್ಥಾಪನಾ ಅನುಭವ ಹೊಂದಿರಬೇಕು. 50 ರಿಂದ 70 ವರ್ಷ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ತಿಳಿಸಲಾಗಿದೆ.

ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳ ನಿರ್ವಹಣೆಯ ಅನುಭವ ಹೊಂದಿರುವವರಿಗೆ ಆದ್ಯತೆ ನೀಡುವ ಸಾಧ್ಯತೆಯಿದೆ. ಇತ್ತೀಚೆಗೆ ರಾಮ ಮಂದಿರ ಟ್ರಸ್ಟ್‌ನ ಆಡಳಿತ ಮತ್ತು ದೇಣಿಗೆ ನಿರ್ವಹಣೆಗೆ ಸಂಬಂಧಿಸಿದಂತೆ ಕೆಲವು ವಿವಾದಗಳು ಉದ್ಭವಿಸಿದ್ದ ಹಿನ್ನೆಲೆ, ಸಂಸ್ಥೆಯ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಸಿಇಒ ಹುದ್ದೆ ಸೃಷ್ಟಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಇದನ್ನೂ ಓದಿ: H. D ರೇವಣ್ಣಗೆ ಮತ್ತೆ ಕಾನೂನು ಸಂಕಷ್ಟ: ಸುಪ್ರೀಂನಿಂದ ನೋಟಿಸ್

ಈ ಹುದ್ದೆ ದೇವಸ್ಥಾನದ ಆಡಳಿತದಲ್ಲಿ ಹೆಚ್ಚಿನ ಹೊಣೆಗಾರಿಕೆ, ಪಾರದರ್ಶಕತೆ ಹಾಗೂ ಪರಿಣಾಮಕಾರಿ ನಿರ್ವಹಣೆಗೆ ನೆರವಾಗಲಿದೆ ಎಂದು ಟ್ರಸ್ಟ್ ವಿಶ್ವಾಸ ವ್ಯಕ್ತಪಡಿಸಿದೆ.

ಅಯೋಧ್ಯೆಯ ರಾಮ ಮಂದಿರವು ದೇಶದ ಅತ್ಯಂತ ಮಹತ್ವದ ಧಾರ್ಮಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಪ್ರತಿದಿನ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ನಿರ್ವಹಣೆಗೆ ವೃತ್ತಿಪರ ನಾಯಕತ್ವದ ಅಗತ್ಯ ಹೆಚ್ಚುತ್ತಿರುವುದರಿಂದ ಸಿಇಒ ನೇಮಕಾತಿಗೆ ಟ್ರಸ್ಟ್ ಮುಂದಾಗಿದೆ.