ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಪ್ರಯಾಣಿಕರ ಪಾಲಿಗೆ ವಾರಾಂತ್ಯವು ಕರಾಳ ದಿನವಾಗಿ ಮಾರ್ಪಟ್ಟಿದೆ. ಎರಡು ಸರ್ಕಾರಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬರೋಬ್ಬರಿ 11 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ನಡೆದಿದ್ದು ಎಲ್ಲಿ?: ಶಿವಗಂಗಾ ಜಿಲ್ಲೆಯ ತಿರುಪತ್ತೂರು ಸಮೀಪದ ಕುಮ್ಮಂಗುಡಿ ಎಂಬಲ್ಲಿ ಈ ದುರಂತ ಸಂಭವಿಸಿದೆ. ಪ್ರಸಿದ್ಧ ಪಿಳ್ಳೈಯಾರ್‌ಪಟ್ಟಿ ದೇವಸ್ಥಾನದಿಂದ ಕೇವಲ ಐದು ಕಿಲೋಮೀಟರ್ ದೂರದಲ್ಲಿ ಈ ಅವಘಡ ನಡೆದಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ತಿರುಪ್ಪೂರಿನಿಂದ ಕಾರೈಕುಡಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಮತ್ತು ಕಾರೈಕುಡಿಯಿಂದ ದಿಂಡಿಗಲ್ ಕಡೆಗೆ ವೇಗವಾಗಿ ಬರುತ್ತಿದ್ದ ಮತ್ತೊಂದು ಸರ್ಕಾರಿ ಬಸ್ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ಗಳ ಪತ್ರಾಸ್ ಕತ್ತರಿಸಿ ಒಳಗಿದ್ದವರನ್ನು ಹೊರತೆಗೆಯಬೇಕಾಯಿತು.
ಆಕ್ರಂದನ ಮುಗಿಲು ಮುಟ್ಟಿತು: ಅಪಘಾತ ನಡೆದ ತಕ್ಷಣ ಸ್ಥಳೀಯರು ಹಾಗೂ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ತಿರುಪತ್ತೂರು ಮತ್ತು ಕಾರೈಕುಡಿ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ.
ಒಂದೇ ವಾರದಲ್ಲಿ ಎರಡನೇ ದುರಂತ: ದಕ್ಷಿಣ ತಮಿಳುನಾಡಿನಲ್ಲಿ ಒಂದೇ ವಾರದಲ್ಲಿ ಸಂಭವಿಸಿದ ಎರಡನೇ ದೊಡ್ಡ ಬಸ್ ಅಪಘಾತ ಇದಾಗಿದೆ. ಕೇವಲ ಕೆಲವು ದಿನಗಳ ಹಿಂದಷ್ಟೇ ತೆಂಕಾಸಿ ಜಿಲ್ಲೆಯಲ್ಲಿ ಎರಡು ಖಾಸಗಿ ಬಸ್‌ಗಳು ಅತಿ ವೇಗದಿಂದ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಾಣ ಕಳೆದುಕೊಂಡಿದ್ದರು.
ಆ ಘಟನೆಯ ಮಾಸುವ ಮುನ್ನವೇ ಈಗ ಮತ್ತೊಂದು ದುರಂತ ಸಂಭವಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಚಾಲಕರ ಅಜಾಗರೂಕತೆ ಮತ್ತು ಅತಿಯಾದ ವೇಗವೇ ಈ ಸರಣಿ ಅಪಘಾತಗಳಿಗೆ ಕಾರಣ ಎಂದು ಹೇಳಲಾಗುತ್ತಿದ್ದು, ತಮಿಳುನಾಡು ಸರ್ಕಾರಿ ಸಾರಿಗೆ ಸಂಸ್ಥೆಯ (TNSTC) ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳು ಎದ್ದಿವೆ.























Had a good time on fc178casinologin last night. The registration process was super easy, and I jumped right into playing. A few ups and downs, but overall a good experience. If you’re looking to sign up, head to fc178casinologin. Good luck!