ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ದಾಳಿಯಿಂದ ಹೆಚ್ಚಿದ ಆತಂಕ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಗುಂಡಿನ ಸದ್ದು ಮಾಡಿದ್ದು, ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಕುಲ್ಗಾಮ್ ಜಿಲ್ಲೆಯ ಅಖ್ರಾನ್ ಪ್ರದೇಶದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿ, ಮೂವರು ಯೋಧರನ್ನು ಗಾಯಗೊಳಿಸಿದೆ. ಮೋಟಾರ್‌ಸೈಕಲ್‌ನಲ್ಲಿ ಬಂದಿದ್ದ ಶಂಕಿತ ಉಗ್ರರು ಮೀರಬಜಾರ್ ಸಮೀಪದ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಕಾಶ್ಮೀರದಲ್ಲಿ ಇತ್ತೀಚಿನ ದಿನಗಳಲ್ಲಿ ಉಗ್ರರ ದಾಳಿಗಳು ಭದ್ರತಾ … Continue reading ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ದಾಳಿಯಿಂದ ಹೆಚ್ಚಿದ ಆತಂಕ