SK Home Ad
Home ಸುದ್ದಿ ದೇಶ ಟೈಫಾಯ್ಡ್ ದೃಢವಾದರೂ ಹೋರಾಟ ನಿಲ್ಲದು: ಅಭಿಜೀತ್ ದೀಪ್ಕೆ

ಟೈಫಾಯ್ಡ್ ದೃಢವಾದರೂ ಹೋರಾಟ ನಿಲ್ಲದು: ಅಭಿಜೀತ್ ದೀಪ್ಕೆ

0
10

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಟೈಫಾಯ್ಡ್ ದೃಢಪಟ್ಟಿದೆ. ಆದರೆ, ಇದರ ಮಧ್ಯೆಯೂ ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶನಿವಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿರುವ ದೀಪ್ಕೆ, “ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಟೈಫಾಯ್ಡ್ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು, ಪ್ರತಿದಿನ ಐವಿ ಡ್ರಿಪ್ ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.

ನನ್ನ ಅನಾರೋಗ್ಯವು ಪ್ರತಿಭಟನೆಯ ಮೇಲೆ ಪರಿಣಾಮ ಬೀರುವುದಿಲ್ಲ. ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ಎಂದು ಹೇಳಿದ್ದಾರೆ, ನಮ್ಮ ಹೋರಾಟ ಗುರಿಯನ್ನು ಖಚಿತವಾಗಿ ತಲುಪಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿಂಸಾತ್ಮಕ ಚಳುವಳಿಯ ನಂತರ ಕೇಂದ್ರ ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಇದರಿಂದ ವಾಂಗ್ಚುಕ್ ಅವರು ಉಪವಾಸವನ್ನು ಕೊನೆಗೊಳಿಸಿದ್ದಾರೆ. ಆದರೆ ಸಿಜೆಪಿ ಮಾತ್ರ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವವವರೆಗೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದಿದ್ದಾರೆ.