ಛತ್ರಪತಿ ಸಂಭಾಜಿನಗರ: ನೀಟ್-ಯುಜಿ ಪ್ರಶ್ನೆಪತ್ರಿಕೆ, ಸಿಬಿಎಸ್‌ಇ ಪರೀಕ್ಷೆಗಳಲ್ಲಿ ನಡೆದ ಅಕ್ರಮದ ವಿರುದ್ಧದ ಹೋರಾಟವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಿಲ್ಲಿಸುವುದಿಲ್ಲ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ.
ಪತ್ರಕರ್ತರ ಜತೆ ಮಾತನಾಡಿದ ಅವರು, ನವದೆಹಲಿಯ ಜಂತರ್-ಮಂತರ್‌ನಲ್ಲಿ ನಡೆದ ಪ್ರತಿಭಟನೆ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಸುಮಾರು 7 ಸಾವಿರ ಜನ ಭಾಗಿಯಾಗಿದ್ದಾರೆ. ಈ ಹೋರಾಟವನ್ನು ದೇಶಾದ್ಯಂತ ವಿಸ್ತರಿಸಲಿದೆ ಎಂದು ಎಚ್ಚರಿಕೆ ನೀಡಿದರು.
ನಮ್ಮ ಹೋರಾಟವನ್ನು ಯಾವುದೇ ಕಾರಣಕ್ಕೂ ಹಿಂದೆ ತೆಗೆದುಕೊಳ್ಳುವುದಿಲ್ಲ. ದೇಶಾದ್ಯಂತ ಹೋರಾಟವನ್ನು ಮಾಡಲು ಕ್ರಿಯಾಯೋಜನೆ ರೂಪಿಸಲಿದ್ದೇವೆ. ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದರು.



















