SK Home Ad
Home ಸುದ್ದಿ ದೇಶ ಪೆಲೆಟ್ ಗನ್ ಬಳಕೆ ಅಸಾಧಾರಣ ಸಂದರ್ಭದಲ್ಲಷ್ಟೇ: ಸುಪ್ರೀಂ ಕೋರ್ಟ್

ಪೆಲೆಟ್ ಗನ್ ಬಳಕೆ ಅಸಾಧಾರಣ ಸಂದರ್ಭದಲ್ಲಷ್ಟೇ: ಸುಪ್ರೀಂ ಕೋರ್ಟ್

0
49

ನವದೆಹಲಿ: ಕೆಲವು ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ಪೆಲೆಟ್ ಗನ್‌ಗಳನ್ನು ಬಳಸಲು ಪೊಲೀಸರಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಪೆಲೆಟ್ ಗನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಕೋರಿ ʻಕಾಕ್ರೋಚ್ ಜನತಾ ಪಾರ್ಟಿʼ ನಡೆಸಿದ ʻಸಂಸತ್ ಚಲೋʼ ಪ್ರತಿಭಟನೆ ವೇಳೆ ಪೆಲೆಟ್ ಗನ್ ದಾಳಿಯಿಂದ ಗಾಯಗೊಂಡಿರುವುದಾಗಿ ಹೇಳಿಕೊಂಡಿರುವ ಇಬ್ಬರು ಸಂತ್ರಸ್ತರು ಹಾಗೂ ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಅಜಾದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ನಿ ಮತ್ತು ವಿ. ಮೋಹನಾ ಇದ್ದರು. ಜುಲೈ 20ರಂದು ದೆಹಲಿಯ ಜಂತರ್‌ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಕ್ಷಿಪ್ರ ಕಾರ್ಯಪಡೆ (RAF) ಬಳಸಿದ ಪೆಲೆಟ್ ಗನ್‌ಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸುರಕ್ಷಿತವಾಗಿ ಸಂರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶನ ನೀಡಿತು.

ವಿಚಾರಣೆ ವೇಳೆ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಾರ್ಗಸೂಚಿಗಳನ್ನು ಉಲ್ಲೇಖಿಸಿದ ನ್ಯಾಯಪೀಠ, “ಪೆಲೆಟ್ ಗನ್‌ಗಳನ್ನು ಅಸಾಧಾರಣ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಲು ಪೊಲೀಸರಿಗೆ ಅಧಿಕಾರವಿದೆ” ಎಂದು ಸ್ಪಷ್ಟಪಡಿಸಿತು.

ಇದೇ ವೇಳೆ, ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ನಿಂದ ಗಾಯಗೊಂಡಿರುವವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಹಾಗೂ ಸೂಕ್ತ ಆರೈಕೆ ಒದಗಿಸುವಂತೆ ದೆಹಲಿ ಸರ್ಕಾರಕ್ಕೂ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯಲ್ಲಿ ಪೆಲೆಟ್ ಗನ್ ಬಳಕೆಯ ಸಂದರ್ಭ, ನಿಯಮಾವಳಿ ಹಾಗೂ ಘಟನೆಗೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯ ಪರಿಶೀಲಿಸುವ ಸಾಧ್ಯತೆ ಇದೆ.