ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ಬೆಳಗ್ಗೆ ಸಾಮೂಹಿಕ ಗಾಯನ ಕಾರ್ಯಕ್ರಮ ನಡೆಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ವಂದೇ ಮಾತರಂ ಗೀತೆಯು ದೇಶದ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಮೂಡಿಸುವಲ್ಲಿ ಪ್ರೇರಣೆ ನೀಡಿತ್ತು.
ಆ ಗೀತೆಯನ್ನು ದೇಶದ ಪ್ರತಿಯೊಬ್ಬ ಸ್ವಾಭಿಮಾನಿ ಭಾರತೀಯನೂ ನೆನಪಿಸಿಕೊಳ್ಳಬೇಕು. 2047ರಲ್ಲಿ ಭಾರತವು ಅಭಿವೃದ್ಧಿ ಹೊಂದಿದ ದೇಶವಾಗಿ ಪರಿವರ್ತನೆ ಕಾಣಬೇಕಿದೆ. ಶಕ್ತಿಶಾಲಿ, ಸಮೃದ್ಧ ದೇಶವಾಗಿ ಭಾರತವು ಹೊರಹೊಮ್ಮಬೇಕು.
ಆ ನಿಟ್ಟಿನಲ್ಲಿ ವಂದೇ ಮಾತರಂ ಪ್ರೇರಣೆ ನೀಡಲಿ. ದೇಶಾದ್ಯಂತ ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಯು ಅರ್ಥಪೂರ್ಣವಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ.ಮೋಹನ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಬಸವರಾಜ ಮತ್ತಿಮಡು, ವಿಧಾನಪರಿಷತ್ ಸದಸ್ಯರಾದ ಭಾರತಿ ಶೆಟ್ಟಿ, ಕೇಶವ ಪ್ರಸಾದ್, ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ರಾಜ್ಯ ಕಾರ್ಯದರ್ಶಿಗಳಾದ ವಿನಯ್ ಬಿದರೆ, ಅಂಬಿಕಾ ಹುಲಿನಾಯ್ಕರ್, ಶರಣು ತಳ್ಳಿಕೇರಿ, ಹೆಚ್.ಸಿ. ತಮ್ಮೇಶ್ ಗೌಡ, ಬೆಂಗಳೂರು ಉತ್ತರ
ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ನವದೆಹಲಿಯಲ್ಲಿ ವರ್ಷಪೂರ್ತಿ ನಡೆಯುವ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದು, ಇದಕ್ಕೂ ಮೊದಲು ಬಿ.ವೈ. ವಿಜಯೇಂದ್ರ ಹಾಗೂ ಇತರ ಪ್ರಮುಖರು ಅದನ್ನು ಟಿ.ವಿ. ಮೂಲಕ ವೀಕ್ಷಿಸಿದರು.























