Home ಸುದ್ದಿ ದೇಶ ಉಪರಾಷ್ಟ್ರಪತಿ ಚುನಾವಣೆ: ಕರ್ನಾಟಕ ರಾಜ್ಯಪಾಲರ ಹೆಸರು!

ಉಪರಾಷ್ಟ್ರಪತಿ ಚುನಾವಣೆ: ಕರ್ನಾಟಕ ರಾಜ್ಯಪಾಲರ ಹೆಸರು!

0

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು ಆಗಸ್ಟ್ 21 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 9ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. ಈ ಹುದ್ದೆಗೆ ಅಚ್ಚರಿಯ ಹೆಸರುಗಳು ಕೇಳಿ ಬರುತ್ತಿವೆ.

ಜಗದೀಪ್ ಧನಕರ್ ರಾಜೀನಾಮೆ ಬಳಿಕ ಭಾರತದ ಉಪರಾಷ್ಟ್ರಪತಿ ಹುದ್ದೆ ತೆರವಾಗಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣೆ ಅಧಿಸೂಚನೆ ಪ್ರಕಟಿಸಿದೆ. ಆದರೆ ಇದುವರೆಗೂ ಎನ್‌ಡಿಎ ಅಥವ ಇಂಡಿಯಾ ಮೈತ್ರಿಕೂಟ ಇದುವರೆಗೂ ಅಭ್ಯರ್ಥಿ ಘೋಷಣೆ ಮಾಡಿಲ್ಲ.

ಕರ್ನಾಟಕ ರಾಜ್ಯಪಾಲರ ಹೆಸರು: ಎನ್‌ಡಿಎ ಮೈತ್ರಿಕೂಟಕ್ಕೆ ಇರುವ ಸಂಖ್ಯಾಬಲಕ್ಕೆ ಚುನಾವಣೆಯಲ್ಲಿ ಗೆಲುವು ಸುಲಭವಾಗಿದೆ. ಉಪರಾಷ್ಟ್ರಪತಿ ಹುದ್ದೆಗೆ ಹಲವು ಹೆಸರುಗಳು ಕೇಳಿ ಬರುತ್ತಿವೆ. ಇದರಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರು ಸಹ ಸೇರಿದೆ.

ಉಪರಾಷ್ಟ್ರಪತಿ ಹುದ್ದೆಗೆ ಥಾವರ್ ಚಂದ್ ಗೆಹ್ಲೋಟ್, ದಹೆಲಿ ಲೆಫ್ಟಿನೆಂಟ್ ಗೌರ್ನರ್ ವಿಕೆ ಸಕ್ಸೆನಾ, ಬಿಹಾರ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್, ಸಿಕ್ಕಿಂ ರಾಜ್ಯಪಾಲ ಓಂ ಮಥೂರ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಹೆಸರುಗಳು ಕೇಳಿ ಬರುತ್ತಿವೆ.

ಈ ಹಿಂದೆ ಎನ್‌ಡಿಎ ಮೈತ್ರಿಕೂಟ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್ ಅವರನ್ನು ಉಪರಾಷ್ಟ್ರಪತಿ ಮಾಡಿತ್ತು. ಆದ್ದರಿಂದ ಈ ಬಾರಿಯೂ ರಾಜ್ಯಪಾಲರನ್ನು ಆಯ್ಕೆ ಮಾಡಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಎನ್‌ಡಿಎ ಮೈತ್ರಿಕೂಟ ಈಗಾಗಲೇ ಉಪರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿ ಆಯ್ಕೆ ಮಾಡುವ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ನೀಡಿದೆ. ಈ ವಾರ ಪ್ರಧಾನಿ ನರೇಂದ್ರ ಮೋದಿ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಜೊತೆ ಉಪ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಎನ್‌ಡಿಎ ಮೈತ್ರಿಕೂಟ ಬೆಂಬಲ ನೀಡಿದೆ. ಆಂಧ್ರ ಪ್ರದೇಶದಲ್ಲಿ ಅಧಿಕಾರದಲ್ಲಿರುವ ಟಿಡಿಪಿ, ಬಿಹಾರದಲ್ಲಿ ಅಧಿಕಾರದಲ್ಲಿರುವ ಜೆಡಿಯು ಮೈತ್ರಿಕೂಟದ ಪ್ರಮುಖ ಪಕ್ಷಗಳು. ಆದ್ದರಿಂದ ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯಲ್ಲಿ ಎಲ್ಲಾ ಪಕ್ಷಗಳ ಒಮ್ಮತವನ್ನು ಬಿಜೆಪಿ ಪಡೆಯಬೇಕಿದೆ.

2021ರ ಜುಲೈ 6ರಿಂದ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಮಧ್ಯಪ್ರದೇಶದ ಮೂಲದ ಅವರು ಕೇಂದ್ರ ಬಿಜೆಪಿ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. 2014 ರಿಂದ 2021ರ ತನಕ ಕೇಂದ್ರದಲ್ಲಿ ಅವರು ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಥಾವರ್ ಚಂದ್ ಗೆಹ್ಲೋಟ್ 1962-1977ರ ತನಕ ಭಾರತೀಯ ಜನಸಂಘದ ಸದಸ್ಯರಾಗಿದ್ದರು. ಉಜ್ಜೈನಿಯ ಬಿಜೆಪಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಭಾರತೀಯ ಯುವ ಮೋರ್ಚಾ, ಮಧ್ಯಪ್ರದೇಶ ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ರಾಷ್ಟ್ರೀಯ ಕಾರ್ಯದರ್ಶಿ, ಭಾರತೀಯ ಜನತಾ ಪಕ್ಷ, ಮಧ್ಯಪ್ರದೇಶ ಮತ್ತು ರಾಷ್ಟ್ರೀಯ ಉಪಾಧ್ಯಕ್ಷರು ಬಿಜೆಪಿ ಈಶಾನ್ಯ ರಾಜ್ಯಗಳ ಉಸ್ತುವಾರಿ (ಅಸ್ಸಾಂ ಹೊರತುಪಡಿಸಿ), ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ, ಮಧ್ಯ ಪ್ರದೇಶ ರಾಜ್ಯದ ವಿವಿಧ ಇಲಾಖೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ ವೇಳಾಪಟ್ಟಿ

  • ಈಗಾಗಲೇ ಉಪರಾಷ್ಟ್ರಪತಿ ಚುನಾವಣೆ ಅಧಿಸೂಚನೆ ಆಗಸ್ಟ್ 7ರ ಗುರುವಾರ ಪ್ರಕಟವಾಗಿದೆ
  • ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಕೆ ಮಾಡಲು 21 ಆಗಸ್ಟ್ ಕೊನೆಯ ದಿನ
  • ಆಗಸ್ಟ್ 22 ನಾಮಪತ್ರಗಳ ಪರಿಶೀಲನೆ
  • ಆಗಸ್ಟ್ 25ರ ಸೋಮವಾರ ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
  • ಸೆಪ್ಟೆಂಬರ್ 9ರ ಮಂಗಳವಾರ ಮತದಾನ ನಡೆಯಲಿದೆ
  • ಸೆಪ್ಟೆಂಬರ್ 9ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ತನಕ ಮತದಾನ, ಬಳಿಕ ಮತ ಎಣಿಕೆ

NO COMMENTS

LEAVE A REPLY

Please enter your comment!
Please enter your name here

Exit mobile version