Home Advertisement
Home ಸುದ್ದಿ ದೇಶ ನರೇಂದ್ರ ಮೋದಿ, ರಾಹುಲ್‌ ಗಾಂಧಿಗೆ ಧನ್ಯವಾದ ಹೇಳಿದ ವಿಜಯ್‌

ನರೇಂದ್ರ ಮೋದಿ, ರಾಹುಲ್‌ ಗಾಂಧಿಗೆ ಧನ್ಯವಾದ ಹೇಳಿದ ವಿಜಯ್‌

0
144

ನವದೆಹಲಿ: ತಮಿಳುನಾಡಿನ ರಾಜ್ಯ ರಾಜಕೀಯದಲ್ಲಿ ಧೂಳೆಬ್ಬಿಸಿರುವ ದಳಪತಿ ವಿಜಯ್‌, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ನಮ್ಮ ಜನರ ಯೋಗಕ್ಷೇಮ ನಮ್ಮ ಏಕೈಕ ಗುರಿಯಾಗಿ ಉಳಿದಿದೆ. ರಾಜಕೀಯವನ್ನು ಮೀರಿ, ನಾವು ರಾಜ್ಯದ ಪ್ರಗತಿ ಮತ್ತು ತಮಿಳುನಾಡಿನ ಜನರ ಕಲ್ಯಾಣದ ಮೇಲೆ ಕೇಂದ್ರೀಕರಿಸುತ್ತೇವೆ. ಈ ಪ್ರಯತ್ನದಲ್ಲಿ ನಾವು ಕೇಂದ್ರ ಸರ್ಕಾರದ ಬೆಂಬಲವನ್ನು ಎದುರು ನೋಡುತ್ತಿದ್ದೇವೆ.” ಎಂದು ಬರೆದುಕೊಂಡಿದ್ದಾರೆ.

ಇನ್ನು, ರಾಹುಲ್‌ ಗಾಂಧಿ ಅವರಿಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಕರೆ ಮಾಡಿ ಶುಭ ಕೋರಿದ ನಿಮಗೆ ಧನ್ಯವಾದಗಳು. ಸಾರ್ವಜನಿಕ ಸೇವೆಯಲ್ಲಿ ಶ್ರೇಷ್ಠತೆಗೆ ಮತ್ತು ಸಾಮೂಹಿಕ ಸಹಕಾರದ ಅಗತ್ಯವಿರುವ ನಮ್ಮ ರಾಜ್ಯದ ಸಾಂಸ್ಕೃತಿಕ ನೀತಿಯನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿರುತ್ತೇವೆ. ರಾಜಕೀಯವನ್ನು ಮೀರಿ, ತಮಿಳುನಾಡಿನ ಜನರ ಕಲ್ಯಾಣಕ್ಕೆ ನಾವು ಆದ್ಯತೆ ನೀಡುತ್ತೇವೆ.” ಎಂದು ಬರೆದುಕೊಂಡಿದ್ದಾರೆ.