Home ಸುದ್ದಿ ದೇಶ ಮೋದಿ – ಆರ್‌ಎಸ್‌ಎಸ್‌ ಸರ್ಕಾರ ತೆಗೆದುಹಾಕುತ್ತೇವೆ: ರಾಹುಲ್‌ ಪ್ರತಿಜ್ಞೆ

ಮೋದಿ – ಆರ್‌ಎಸ್‌ಎಸ್‌ ಸರ್ಕಾರ ತೆಗೆದುಹಾಕುತ್ತೇವೆ: ರಾಹುಲ್‌ ಪ್ರತಿಜ್ಞೆ

0
25

ನವದೆಹಲಿ: “ಸತ್ಯ ಮತ್ತು ಅಸತ್ಯದ ನಡುವಿನ ಈ ಹೋರಾಟದಲ್ಲಿ, ಚುನಾವಣಾ ಆಯೋಗವು ಬಿಜೆಪಿ ಸರ್ಕಾರದೊಂದಿಗೆ ಕೆಲಸ ಮಾಡುತ್ತಿದೆ” ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿದರು.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ‘ಮತ ಕಳ್ಳತನ’ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಪಕ್ಷ ಸತ್ಯದೊಂದಿಗೆ ನಿಂತಿದೆ. ಸತ್ಯದೊಂದಿಗೆ ಇದ್ದು ಮೋದಿ, ಅಮಿತ್‌ ಶಾ, ಆರ್‌ಎಸ್‌ಎಸ್ ಸರ್ಕಾರವನ್ನ ಅಧಿಕಾರದಿಂದ ತೆಗೆದುಹಾಕುತ್ತೇವೆ. ಇದು ನನ್ನ ಗ್ಯಾರಂಟಿ ಎಂದರು.

ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್, ದೇಶದಲ್ಲಿ ಎಂದಿಗೂ ಮತ ಕಳ್ಳತನಕ್ಕೆ ಅವಕಾಶ ನೀಡಬೇಡಿ ಎಂದು ಜನರಿಗೆ ಮನವಿ ಮಾಡಿದರು.

ಇದನ್ನೂ ಓದಿ: ಬಾಂಡಿ ಬೀಚ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ: 10 ಮಂದಿ ದಾರುಣ ಸಾವು

ಸತ್ಯ ಮತ್ತು ಅಸತ್ಯದ ನಡುವಿನ ಈ ಹೋರಾಟದಲ್ಲಿ, ಚುನಾವಣಾ ಆಯೋಗವು ಬಿಜೆಪಿ ಸರ್ಕಾರದೊಂದಿಗೆ ಕೆಲಸ ಮಾಡುತ್ತಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರ ಹೆಸರುಗಳನ್ನು ಉಲ್ಲೇಖಿಸಿ ಅವರು ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತು ಸಚಿನ್ ಪೈಲಟ್, ರಣದೀಪ್ ಸಿಂಗ್‌ ಸುರ್ಜೇವಾಲ ಸೇರಿದಂತೆ ಹಿರಿಯ ನಾಯಕರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.