ಅಮೆರಿಕದ ಲಾಸ್ ಏಂಜಲೀಸ್‌ನ ಹಂಟಿಂಗ್ಟನ್ ಬೀಚ್ ಕರಾವಳಿಯಲ್ಲಿ ಹಾರುತ್ತಿದ್ದ ಹೆಲಿಕಾಪ್ಟರ್ ಇದ್ದಕ್ಕಿದ್ದಂತೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐದು ಜನರು ಗಾಯಗೊಂಡಿದ್ದಾರೆ.
ನಿನ್ನೆ ಈ ಅಪಘಾತ ನಡೆದಿದ್ದು ಹೆಲಿಕಾಪ್ಟರ್ ಅಪಘಾತದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಹೆಲಿಕಾಪ್ಟರ್ ಅಪಘಾತದಲ್ಲಿ ಇದುವರೆಗೆ ಐದು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಮತ್ತು ಇತರ ಮೂವರು ರಸ್ತೆಯಲ್ಲಿದ್ದರು ಎಂದು ತಿಳಿದು ಬಂದಿದೆ. ಈ ಮೂವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರವಾಸಿಗರು ಮತ್ತು ನೋಡುಗರು ಸೆರೆಹಿಡಿದ ಅಪಘಾತದ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಮಾನವು ನಿಯಂತ್ರಣ ತಪ್ಪಿ ಬೀಚ್ ಪಾರ್ಕಿಂಗ್ ಪ್ರದೇಶದಲ್ಲಿದ್ದ ತಾಳೆ ಮರಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.