ಕೊಲಂಬಿಯಾದಲ್ಲಿ ಪ್ರಬಲ ಭೂಕಂಪ: 45ಕ್ಕೂ ಅಧಿಕ ಜನರ ಸಾವು

ಬೊಗೋಟಾ: ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ ಸಂಭವಿಸಿದ 7.4 ತೀವ್ರತೆಯ ಪ್ರಬಲ ಭೂಕಂಪಕ್ಕೆ 45ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಹಲವು ಕಟ್ಟಡಗಳು ಕುಸಿದಿದ್ದು, ಅವಶೇಷಗಳಡಿ ಜನರು ಸಿಲುಕಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ, ಬೊಗೋಟಾದಿಂದ ಸುಮಾರು 400 ಕಿಲೋಮೀಟರ್ ಪಶ್ಚಿಮದಲ್ಲಿರುವ ಸುಮಾರು 4,800 ಜನಸಂಖ್ಯೆಯ ಸ್ಯಾನ್ ಜೋಸ್ ಡೆಲ್ ಪಾಲ್ಮರ್ ಪ್ರದೇಶದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಭೂಮಿಯ ಮೇಲ್ಮೈಯಿಂದ ಸುಮಾರು 107 ಕಿಲೋಮೀಟರ್ ಆಳದಲ್ಲಿ ಭೂಕಂಪ … Continue reading ಕೊಲಂಬಿಯಾದಲ್ಲಿ ಪ್ರಬಲ ಭೂಕಂಪ: 45ಕ್ಕೂ ಅಧಿಕ ಜನರ ಸಾವು