IPL 2025: 18ನೇ ಆವೃತ್ತಿಯ ಉಳಿದ ಪಂದ್ಯಗಳು ಅಮಾನತು

18ನೇ ಆವೃತ್ತಿಯ 16 ಪಂದ್ಯಗಳು ಅನಿರ್ದಿಷ್ಟಾವಧಿಗೆ ಅಮಾನತು

ನವದೆಹಲಿ: 18ನೇ ಆವೃತ್ತಿಯ ಐಪಿಎಲ್‌ ಇನ್ನುಳಿದ ಪಂದ್ಯಗಳನ್ನು ಬಿಸಿಸಿಐ ಅಮಾನತು ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮ ಉಂಟಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಉದ್ವಿಗ್ನತೆಯ ಪರಿಣಾಮ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನ ಉಳಿದ ಪಂದ್ಯಗಳನ್ನು ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಎಲ್ಲರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್‌ ಮುಂದೂಡಿಕೆ ಮಾಡಿ ಬಿಸಿಸಿಐ ಅಮಾನತು ಮಾಡಿದ್ದು, ಮುಂದಿನ ಸೂಚನೆ ಬರುವವರೆಗೂ ಲೀಗ್ ಅನ್ನು ಸ್ಥಗಿತಗೊಳಿಸಲಾಗಿದೆ.