Home ತಾಜಾ ಸುದ್ದಿ Karma Hit back ಎಂದರೇ ಇದೇ ಅಲ್ಲವೇ…

Karma Hit back ಎಂದರೇ ಇದೇ ಅಲ್ಲವೇ…

0

ಬೆಂಗಳೂರು: ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ!, ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇsss ಗತಿ!!, Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು.. ನಿಮಗೂ ಭಯವಿದೆsss!!
ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.

Exit mobile version