SK Home Ad
Home ಸುದ್ದಿ ರಾಜ್ಯ ಸರ್ಕಾರ ಇನ್ಮುಂದೆ ಅಕ್ಕಿ ಬದಲು ಆಹಾರ ಧಾನ್ಯಗಳ ಕಿಟ್! ರೇಷನ್ ಕಾರ್ಡ್‌ ದಾರರಿಗೆ ಹೊಸ...

ರಾಜ್ಯ ಸರ್ಕಾರ ಇನ್ಮುಂದೆ ಅಕ್ಕಿ ಬದಲು ಆಹಾರ ಧಾನ್ಯಗಳ ಕಿಟ್! ರೇಷನ್ ಕಾರ್ಡ್‌ ದಾರರಿಗೆ ಹೊಸ ಸೌಲಭ್ಯ

0
25

ಬೆಂಗಳೂರು:  ರಾಜ್ಯದ ಪಡಿತರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು ಕರ್ನಾಟಕ ಸರ್ಕಾರ ಮುಂದಾಗಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರುವ ಬಳಕೆ ಅಕ್ಕಿಯ ಬಳಕೆ  ಕಡಿಮೆ ಇರುವ ಪ್ರದೇಶಗಳಲ್ಲಿ ಫಲಾನುಭವಿಗಳಿಗೆ ಅಕ್ಕಿಯ ಬದಲಿಗೆ ವಿವಿಧ ಆಹಾರ ಧಾನ್ಯಗಳನ್ನು ಒಳಗೊಂಡ ಪೌಷ್ಟಿಕ ಆಹಾರ ಕಿಟ್ ವಿತರಿಸುವ ಕುರಿತು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ಮಾಹಿತಿ ನೀಡಿದ್ದಾರೆ.

ಅಕ್ಕಿ ಬದಲು ಏನೆಲ್ಲ ಸಿಗಲಿದೆ?

ರಾಜ್ಯದ ಕೆಲವು ಪ್ರದೇಶಗಳಲ್ಲಿ ಅಕ್ಕಿ ಬೆಳೆಯುವ ಪ್ರದೇಶಗಳಲ್ಲಿ ಪಡಿತರ ಅಕ್ಕಿಯ ಬಳಕೆ ಕಡಿಮೆ ಕಡಿಮೆ ಇರುವುದನ್ನು ಗಮನದಲ್ಲಿಟ್ಟುಕೊಂಡು, ಫಲಾನುಭವಿಗಳಿಗೆ ಅಕ್ಕಿಯ ಬದಲಿಗೆ ವಿವಿಧ ಆಹಾರ ಧಾನ್ಯಗಳನ್ನು ನೀಡುವ ಉದ್ದೇಶ ಹೊಂದಲಾಗಿದೆ. ಈ ಕಿಟ್‌ನಲ್ಲಿ ತೊಗರಿ ಬೇಳೆ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸೇರಿಸುವ ಬಗ್ಗೆ ಚಿಂತನೆ ನಡೆದಿದೆ.

ಫಲಾನುಭವಿಗಳ ಆರೋಗ್ಯ ಮತ್ತು ಪೌಷ್ಟಿಕಾಂಶದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಅಕ್ರಮ ಅಕ್ಕಿ ದಂಧೆಗೆ ಕಡಿವಾಣ

ಇದೇ ವೇಳೆ ಬಡವರಿಗೆ ಸೇರಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಸರ್ಕಾರ ಕಾರ್ಯಾಚರಣೆ ಮುಂದುವರಿಸಿದೆ. ಕಳೆದ ಎರಡು ತಿಂಗಳ ಕಾರ್ಯಾಚರಣೆಯಲ್ಲಿ ಸುಮಾರು 5,000 ಟನ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. 415 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, 285 ಜನರನ್ನು ಬಂಧಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಯಾವಾಗ ಜಾರಿಗೆ ಬರಲಿದೆ?

ಆಹಾರ ಧಾನ್ಯಗಳ ಕಿಟ್ ವಿತರಣೆ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸುವ ಉದ್ದೇಶವಿದೆ ಎಂದು ಸಚಿವರು ತಿಳಿಸಿದ್ದಾರೆ. ಆದರೆ ಕಿಟ್‌ನಲ್ಲಿ ಯಾವೆಲ್ಲ ಪದಾರ್ಥಗಳಿರಲಿವೆ, ವಿತರಣೆಯ ದಿನಾಂಕ ಮತ್ತು ಫಲಾನುಭವಿಗಳ ಆಯ್ಕೆ ಕುರಿತು ಅಂತಿಮ ಮಾರ್ಗಸೂಚಿ ಪ್ರಕಟವಾಗಬೇಕಿದೆ.

ಸದ್ಯಕ್ಕೆ ಪಡಿತರ ಚೀಟಿದಾರರು ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯಬೇಕಿದೆ.