ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ: ಮುಂದಿನ 7 ದಿನದ ಹವಾಮಾನ ಮುನ್ಸೂಚನೆ

0
70

ಬೆಂಗಳೂರು: ಆಗಸ್ಟ್‌ನಿಂದ ಮುಂಗಾರಿನ 2ನೇ ಅವಧಿ ಆರಂಭವಾಗಿದ್ದು, ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ 7 ದಿನಗಳ ಕಾಲ ರಾಜ್ಯದಾದ್ಯಂತ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಲಿದ್ದು ಇಂದಿನಿಂದ ಆಗಸ್ಟ್ 10 ರವರೆಗ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ, ಈಗಾಗಲೇ ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಇದ್ದು ಎರಡು ದಿನಗಳ ನಂತರ ಅಂದರೆ ಆಗಸ್ಟ್ 6 ರಿಂದ ಆಗಸ್ಟ್ 8 ರವರೆಗೆ ಆರೇಂಜ್ ಅಲರ್ಟ್ ನೀಡಲಾಗಿದ್ದು, ಮುಂದಿನ ಎರಡು ದಿನಗಳ ಕಾಲ ಆಗಸ್ಟ್‌ 9, 10 ರಂದು ಸಹ ಉತ್ತಮ ಮಳೆಯಾಗಲಿದೆ ಎನ್ನಲಾಗಿದೆ.

ಮುಂಗಾರು ಋತುವಿನ ಮೊದಲಾರ್ಧದಲ್ಲಿ(ಜೂನ್ ಮತ್ತು ಜುಲೈ) ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಉಂಟಾಗಿದ್ದರಿಂದ ಕೆಲವು ರಾಜ್ಯಗಳು, ವಿಶೇಷವಾಗಿ ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ ಉಂಟಾಗಿತ್ತು. ಆಗಸ್ಟ್‌ನಲ್ಲಿ ಆರಂಬಾವಾಗುವ ಮುಂಗಾರಿನ ದ್ವಿತೀಯಾರ್ಧದ ಮಳೆಯು ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ ಎಂದು ತಿಳಿಸಿದೆ.

ಆಗಸ್ಟ್​​ 10 ರವರೆಗೂ ಮಳೆ: ಆಗಸ್ಟ್ 5 ರಿಂದ ಆಗಸ್ಟ್ 10ರವರೆಗೆ ಕರ್ನಾಟಕದ 27ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಇದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಏನ್ನಲಾಗಿದೆ.

ಯೆಲ್ಲೋ ಅಲರ್ಟ್: ಈ ಸಂಧರ್ಭದಲ್ಲಿ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಇದು 11-20 ಸೆಂ.ಮೀ. ಭಾರಿ ಮಳೆಯನ್ನು ಸೂಚಿಸುತ್ತದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇವತ್ತು ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, 6-11 ಸೆಂ.ಮೀ. ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದೆ, ಆಗಸ್ಟ್ 7 ರವರೆಗೆ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು ನಗರದಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಸಂಜೆ ಹಾಗೂ ರಾತ್ರಿಯಲ್ಲಿ ಮಳೆ ಹೆಚ್ಚಾಗಬಹುದಾಗಿದೆ.

ಜಲಾಶಯ ಭರ್ತಿ ರಾಜ್ಯದಲ್ಲಿ ಮಳೆ ಹೆಚ್ಚಾಗಿ ಸುರಿಯುತ್ತಿರೋ ಹಿನ್ನೆಲೆಯಲ್ಲಿ ನದಿಗಳಲ್ಲಿ ಮತ್ತೆ ಪ್ರವಾಹ ಹಾಗೂ ಜಲಾಶಯಗಳ ಒಳ ಹರಿವು ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಮುಂಗಾರು ಋತುವಿನ ದ್ವಿತೀಯಾರ್ಧದಲ್ಲೂ ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

Previous articleSaina Nehwal: ಮತ್ತೆ ಒಂದಾಗುತ್ತೇವೆ ಎಂದ ಸೈನಾ-ಕಶ್ಯಪ್
Next articleಶಿವಮೊಗ್ಗಕ್ಕೆ ಬರಲಿದೆ ಯುದ್ಧ ವಿಮಾನ, ವಿಶೇಷತೆಗಳು

LEAVE A REPLY

Please enter your comment!
Please enter your name here