ಕರ್ನಾಟಕಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಸೀಟು ಹೆಚ್ಚಳಕ್ಕೆ ಅನುಮೋದನೆ ನೀಡಿದ ಹಿನ್ನೆಲೆ ರಾಜ್ಯದ 8 ಸರ್ಕಾರಿ ವೈದ್ಯಕೀಯ ಕಾಲೇಜುಗಳು ತಲಾ 50 ಹೆಚ್ಚುವರಿ ಸೀಟುಗಳನ್ನು ಪಡೆದಿವೆ.
ಇವುಗಳಲ್ಲಿ ಬೆಳಗಾವಿ, ಚಿಕ್ಕಬಳ್ಳಾಪುರ, ಗುಲ್ಬರ್ಗಾ, ಹಾಸನ ವೈದ್ಯ ಕೀಯ ವಿಜ್ಞಾನ ಸಂಸ್ಥೆಗಳಿಗೆ, ಮೈಸೂರು ವೈದ್ಯ ಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳು ಸೇರಿವೆ.
ಪವೇಶ ಹೆಚ್ಚಳಕ್ಕೆ ಅರ್ಜಿ ಸಲ್ಲಿಸಿದ್ದ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಿಗೆ ಅನುಮೋದನೆ ದೊರೆತಿಲ್ಲ.
ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಪಟ್ಟಿಯಲ್ಲಿ, ರಾಮನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಕನಕಪುರ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಪ್ರಸ್ತಾವನೆಯನ್ನು ಹಿಂಪಡೆಯಲಾಗಿದೆ ಎಂದು ಗುರುತಿಸಲಾಗಿದೆ. ಆರಂಭದಲ್ಲಿ 150 ಮತ್ತು 100 ಸೀಟುಗಳನ್ನು ಕೋರಲಾಗಿತ್ತು. ಆದರೆ ಮೂಲಸೌಕರ್ಯಗಳ ಕೊರತೆಯಿಂದಾಗಿ ಅವುಗಳನ್ನು ಆರಂಭದಲ್ಲಿ ತಿರಸ್ಕರಿಸಲಾಗಿದೆ.
“ಸರ್ಕಾರಿ ವೈದ್ಯಕೀಯ ಕಾಲೇಜು ಗಳಲ್ಲೂ ಇನ್ನು ಮುಂದೆ ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ಶೇ.15ರಷ್ಟು ಸೀಟುಗಳನ್ನು ಮೀಸಲಿಡಲಾಗುತ್ತಿದೆ. ಒಂದು ಎನ್‌ಆರ್‌ಐ ಸೀಟಿಗೆ 25 ಲಕ್ಷ ರೂ.ನಿಗದಿ ಮಾಡಲಾಗಿದೆ. ಇದರಿಂದ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಸರ್ಕಾರದ ಅನುದಾನದ ಮೇಲೆ ಹೆಚ್ಚು ಅವಲಂಬಿತವಾಗದೆ ಸ್ವಾವಲಂಬನೆ ಸಾಧಿಸಲು ನೆರವಾಗಲಿದೆ” ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.
ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ, ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರಮಠ ವೈದ್ಯಕೀಯ ಕಾಲೇಜಿಗೆ ಹೆಚ್ಚುವರಿಯಾಗಿ 50 ಸೀಟುಗಳು ದೊರೆತಿವೆ. ತುಮಕೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಬೆಂಗಳೂರಿನ ಶ್ರೀ ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರಕ್ಕೆ ಹೆಚ್ಚುವರಿ ಸೀಟುಗಳಿಗೆ ಅನುಮೋದನೆ ದೊರೆತಿಲ್ಲ.
ಲಂಚ ಪ್ರಕರಣದಲ್ಲಿ ಸಿಲುಕಿರುವ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿಗೆ (ಜೆಎನ್‌ಎಂಸಿ) ಪ್ರವೇಶಕ್ಕೆ ಅನುಮತಿ ನೀಡದಂತೆ ಎನ್.ಎಂಸಿಯ ಪದವಿ ಪೂರ್ವ ವೈದ್ಯಕೀಯ ಶಿಕ್ಷಣ ಮಂಡಳಿಯ ಆದೇಶಕ್ಕೆ ಧಾರವಾಡ ಹೈಕೋರ್ಟ್‌ನ ಪೀಠ ತಡೆಯಾಜ್ಞೆ ನೀಡಿದೆ.
ಆಗಸ್ಟ್ 29ರ ಆದೇಶದ ಪ್ರಕಾರ, ವೈದ್ಯಕೀಯ ಸಮಾ ಲೋಚನಾ ಸಮಿತಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕ್ರಮವಾಗಿ 188 ಎಂಬಿಬಿಎಸ್ ಸೀಟುಗಳು ಮತ್ತು 12 ಎಂಬಿಬಿಎಸ್ ಸೀಟುಗಳನ್ನು ಸೀಟ್ ಮ್ಯಾಟಿಕ್ಸ್‌ಗಳಲ್ಲಿ ಸೇರಿಸಲು ಮತ್ತು 2025-26 ಶೈಕ್ಷಣಿಕ ವರ್ಷಕ್ಕೆ ವಿಳಂಬವಿಲ್ಲದೆ ಪ್ರವೇಶವನ್ನು ಮುಂದೆ ವಿವರಿಸಲು ನಿರ್ದೇಶಿಸಲಾಗಿದೆ. ಕಳೆದ ವರ್ಷ, ಕರ್ನಾಟಕವು ಒಟ್ಟು 12,395 ಎಂಬಿಬಿಎಸ್ ಸೀಟುಗಳನ್ನು ಹೊಂದಿತ್ತು.