Home ಸುದ್ದಿ ರಾಜ್ಯ ಕರ್ನಾಟಕದ ಶೇ. 85ರಷ್ಟು ವಲಸೆ ಕಾರ್ಮಿಕರು ಈ ಆರು ರಾಜ್ಯದವರು!

ಕರ್ನಾಟಕದ ಶೇ. 85ರಷ್ಟು ವಲಸೆ ಕಾರ್ಮಿಕರು ಈ ಆರು ರಾಜ್ಯದವರು!

0

ನಮ್ಮ ದೇಶದ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರಿಗೆ ಕರ್ನಾಟಕ ನೆಲೆಯಾಗಿದೆ. ಇದರಲ್ಲಿ ಪ್ರತಿಶತ 85 ರಷ್ಟು ಕಾರ್ಮಿಕರು ಕೇವಲ ಆರು ರಾಜ್ಯಗಳಿಂದ ಬಂದವರಾಗಿದ್ದಾರೆ ಎಂದು ಕಾರ್ಮಿಕ ಇಲಾಖೆಯ ಅಂಕಿ ಅಂಶಗಳ ಪ್ರಕಾರ ತಿಳಿದು ಬಂದಿದೆ.

ಜೀವನೋಪಾಯಕ್ಕಾಗಿ ಕರ್ನಾಟಕಕ್ಕೆ ಬಂದಿರುವ ವಲಸೆ ಕಾರ್ಮಿಕರ ಪೈಕಿ ಬಿಹಾರ, ಅಸ್ಸಾಂ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದಿಂದ ಬಂದವರು ಸಂಖ್ಯೆ ಅತ್ಯಧಿಕವಾಗಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರು ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಯಾವುದೇ ಸಮೀಕ್ಷೆ ನಡೆಸಲಾಗದ ಕಾರಣ ರಾಜ್ಯದಲ್ಲಿರುವ ವಲಸೆ ಕಾರ್ಮಿಕರ ಅಂಕಿ ಅಂಶಗಳ ಬಗ್ಗೆ ನಿಖರವಾದ ಮಾಹಿತಿ ದೊರೆತಿಲ್ಲ. ಆದರೆ, ವಿವಿಧ ಕಾನೂನುಗಳ ಅಡಿಯಲ್ಲಿ ಉದ್ಯೋಗದಾತರು ಸಲ್ಲಿಸಿದ ಮಾಹಿತಿಯ ಪ್ರಕಾರ ಇದನ್ನು ಅಧಿಕೃತ ಅಂಕಿ – ಅಂಶಗಳೆಂದು ನಿರ್ಧರಿಸಲಾಗಿದೆ.

ಭಾರತದ ಎಲ್ಲಾ ರಾಜ್ಯಗಳಿಂದ ಕರ್ನಾಟಕಕ್ಕೆ ವಲಸೆ ಬಂದ ಕಾರ್ಮಿಕರು 78,289 ಜನ ಇದ್ದು, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 18,865 ವಲಸಿಗರು ನೋಂದಣಿ ಮಾಡಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿರುವ ವಲಸಿಗರ ಒಟ್ಟಾರೆ ಸಂಖ್ಯೆಯೂ 97,154 ರಷ್ಟಾಗಿದೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ಇನ್ನು ಅಂತಾರಾಜ್ಯ ಕಾರ್ಮಿಕರು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಇದರಿಂದಾಗಿ ನೋಂದಾಯಿತ ಕಾರ್ಮಿಕರಿಗೆ ಆರೋಗ್ಯ ರಕ್ಷಣೆ, ಮದುವೆ, ಮಕ್ಕಳ ಶಿಕ್ಷಣ ಸೇರಿದಂತೆ ಇನ್ನಿತರ ಆರ್ಥಿಕ ಪ್ರಯೋಜನಗಳನ್ನು ಪಡೆಯಲು ಇದು ಸಹಕಾರಿಯಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version