Home Advertisement
Home ಸುದ್ದಿ ರಾಜ್ಯ SSLC 2026 ಫಲಿತಾಂಶ: ಈ ಬಾರಿಯೂ ವಿದ್ಯಾರ್ಥಿನಿಯರದ್ದೇ ಮೇಲುಗೈ; ಯಾವ ಜಿಲ್ಲೆಗಳಲ್ಲಿ ಹೆಚ್ಚು ಪಾಸ್?

SSLC 2026 ಫಲಿತಾಂಶ: ಈ ಬಾರಿಯೂ ವಿದ್ಯಾರ್ಥಿನಿಯರದ್ದೇ ಮೇಲುಗೈ; ಯಾವ ಜಿಲ್ಲೆಗಳಲ್ಲಿ ಹೆಚ್ಚು ಪಾಸ್?

0
200

ಬೆಂಗಳೂರು: ರಾಜ್ಯದ ಲಕ್ಷಾಂತರ SSLC ವಿದ್ಯಾರ್ಥಿಗಳ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದ್ದು, 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (ಪರೀಕ್ಷೆ-1) ಫಲಿತಾಂಶವನ್ನುಇಂದು (ಗುರುವಾರ) ಸರಿಯಾಗಿ 12:00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ ದಾಖಲೆ ಮಟ್ಟದ ಅಂದರೆ ಶೇಕಡಾ 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಹಾಗೇ ನಗರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶದ ವಿವರಗಳನ್ನು ಹಂಚಿಕೊಂಡರು. ಜಿಲ್ಲಾವಾರು ಸಾಧನೆಯಲ್ಲಿ ಈ ಬಾರಿಯೂ ಕರಾವಳಿ ಜಿಲ್ಲೆಗಳು ಸಿಂಹಪಾಲು ಪಡೆದಿವೆ. ದಕ್ಷಿಣ ಕನ್ನಡ ಜಿಲ್ಲೆಯು ಪ್ರಥಮ ಸ್ಥಾನವನ್ನು ಅಲಂಕರಿಸಿದರೆ, ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಕಳೆದ ಬಾರಿಗಿಂತ ಈ ಬಾರಿ ಫಲಿತಾಂಶದ ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ ಎಂದು ಸಚಿವರು ತಿಳಿಸಿದರು.

ಫಲಿತಾಂಶದ ಅಂಕಿ-ಅಂಶಗಳು:
ಒಟ್ಟು ನೋಂದಣಿ: 7.75 ಲಕ್ಷ ವಿದ್ಯಾರ್ಥಿಗಳು.
ಪರೀಕ್ಷೆಗೆ ಹಾಜರಾದವರು:7.7 ಲಕ್ಷ ವಿದ್ಯಾರ್ಥಿಗಳು.
ಗೈರಾದವರು: 5,000 ವಿದ್ಯಾರ್ಥಿಗಳು.
ಉತ್ತೀರ್ಣರಾದವರು: 7.7 ಲಕ್ಷ ವಿದ್ಯಾರ್ಥಿಗಳು.

ತಂತ್ರಜ್ಞಾನದ ಬಳಕೆ ಮತ್ತು ಸೌಲಭ್ಯ:
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಬಾರಿ ಹಲವು ಸುಧಾರಣೆಗಳನ್ನು ತರಲಾಗಿದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗಳಿಗೆ ವಾಟ್ಸ್‌ಆ್ಯಪ್‌ ಮತ್ತು ಎಸ್‌ಎಂಎಸ್ ಮೂಲಕ ನೇರವಾಗಿ ಫಲಿತಾಂಶವನ್ನು ರವಾನಿಸಲಾಗಿದೆ. ವಿಶೇಷವೆಂದರೆ, ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ತಮ್ಮ ಅಧಿಕೃತ ಅಂಕಪಟ್ಟಿಯನ್ನು ಡಿಜಿಲಾಕರ್ (DigiLocker) ಮೂಲಕ ಡೌನ್‌ಲೋಡ್ ಮಾಡಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಅದೇ ರೀತಿಯಾಗಿ ಕಳೆದ ಬಾರಿ puc ವಿದ್ಯಾರ್ಥಿಗಳ ಫಲಿತಾಂಶವನ್ನ ಯಾವುದೇ ಸಮಸ್ಯ ಅಡ್ಡಿಯಾಗದ ಹಾಗೇ ಡಿಜಿಲಾಕರ್‌ ವ್ಯವಸ್ಥ ಮಾಡಿದ್ದರು. ಈಗ SSLC ವಿದ್ಯಾರ್ಥಿಗಳಿಗೂ ಇಂಥದ್ದೆ ನಿಯಮ ಅಳವಡಿಸಲಾಗಿದೆ. ಅಲ್ಲದೇ.. ಡಿಜಿಲಾಕರ್‌ ಮೂಲಕ ಅಂಕಪಟ್ಟಿಯನ್ನು ನೋಡಬಹುದು.

ಹಾಗೇ ಇಂದು ಮಧ್ಯಾಹ್ನ 12 ಗಂಟೆಯ ನಂತರ ರಾಜ್ಯದ ಎಲ್ಲಾ ಪ್ರೌಢಶಾಲೆಗಳ ನೋಟಿಸ್ ಬೋರ್ಡ್‌ಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಫೇಲಾದ ಅಥವಾ ಅಂಕ ಕಡಿಮೆ ಬಂದ ವಿದ್ಯಾರ್ಥಿಗಳು ಧೃತಿಗೆಡಬಾರದು, ಅವರಿಗೆ ಪರೀಕ್ಷೆ-2 ಮತ್ತು 3ರಲ್ಲಿ ಅವಕಾಶ ನೀಡಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.