ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಯಲ್ಲಿ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಸರ್ಕಾರ ಕಾರ್ಯಕರ್ತೆ, ಸಹಾಯಕಿ ಆಯ್ಕೆ ಮಾಡಲು ಹೊರಡಿಸಿದ ಮಾರ್ಗಸೂಚಿಗಳನ್ನು ಪರಿಷ್ಕರಿಸಿರು ಕುರಿತು ಆದೇಶವನ್ನು ಹೊರಡಿಸಿದೆ.
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಆಯ್ಕೆ ಮಾನದಂಡ
- ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
- ವಯೋಮಿತಿ. ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವರ್ಷ ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ಯ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು ಹಾಗೂ ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
- ಸ್ಥಳೀಯತೆ. ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಆಯ್ಕೆಗೆ ಸ್ಥಳೀಯ ಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆಯುವುದು.
- ನಗರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡ್‌ನಲ್ಲಿ ವಾಸ್ತವ್ಯ ಹೊಂದಿರಬೇಕು ಹಾಗೂ ವಾಸ್ತವ್ಯ ಪಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ [ಚುನಾವಣಾ ವಾರ್ಡ್‌ಗಳನ್ನು ಪರಿಗಣಿಸುವಂತಿಲ್ಲ]
ಪಡೆದಿರಬೇಕು. - ತಹಶೀಲ್ದಾರ್/ ಉಪ ತಹಶೀಲ್ದಾರ್‌ರವರ ಮೂರು ವರ್ಷದ ವಾಸ್ತವ್ಯ ದೃಢೀಕರಣದೊಂದಿಗೆ ಸ್ಥಳೀಯರು ಎಂಬುದನ್ನು ದೃಢೀಕರಿಸಲು ಪೂರಕ ದಾಖಲೆಗಳಾಗಿ ಆಧಾರ ಕಾರ್ಡ್, ರೇಷನ್ ಕಾರ್ಡ್ ಮತದಾರರ ಗುರುತಿನ ಚೀಟಿಗಳನ್ನು ಪಡೆಯುವುದು. ಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪಮಾಣ ಪತ್ರ ಪಡೆಯುವುದು.
- ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ. ಕನಿಷ್ಠ P.U.C. ತೇರ್ಗಡೆ ಹೊಂದಿರಬೇಕು. S.S.L.C.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
- ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ “ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ D.S.E.R.T.ಯಿಂದ ECCE ಡಿಪ್ಲೊಮಾ ಕೋರ್ಸ್, JOC ಕೋರ್ಸ್, N.T.T. ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಸದರಿಯವರಿಗೆ ಬೋನಸ್ +5 ಅಂಕಗಳನ್ನು ನೀಡುವುದು.