SK Home Ad
Home ಸುದ್ದಿ ರಾಜ್ಯ ನೀವು ಗೃಹಲಕ್ಷ್ಮೀ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ರೆ ಈ ಸುದ್ದಿ ಓದಿ

ನೀವು ಗೃಹಲಕ್ಷ್ಮೀ, ಗೃಹಜ್ಯೋತಿ ಫಲಾನುಭವಿಗಳಾ? ಹಾಗಿದ್ರೆ ಈ ಸುದ್ದಿ ಓದಿ

0
197

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳನ್ನು ಪಡೆಯಬೇಕಾದರೆ ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಈ ಯೋಜನೆಗಳ ಹೆಸರಲ್ಲಿ ನೂರಾರು ಕೋಟಿ ರೂಪಾಯಿಗಳು ದುರುಪಯೋಗವಾಗಿರುವ ಹಿನ್ನೆಲೆಯಲ್ಲಿ ಹೊಸ ಅರ್ಹತಾ ಮಾನದಂಡಗಳೊಂದಿಗೆ ಮತ್ತೊಮ್ಮೆ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬೇಕಾಗಿದೆ.

ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ. ಹಾಗೂ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳಿಗೆ 2 ಸಾವಿರ ರೂ. ಆರ್ಥಿಕ ನೆರವು ನೀಡಲಾಗುತ್ತಿದೆ.

ಯಾರೆಲ್ಲ ಅರ್ಹರು: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಕುಟುಂಬದ ಯಜಮಾನಿ ಮಹಿಳೆ ಅರ್ಹರಾಗಿದ್ದಾರೆ. ಆದರೆ ಅಂತ್ಯೋದಯ, ಬಿಪಿಎಲ್ ಅಥವಾ ಎಪಿಎಲ್ ಪಡಿತರ ಚೀಟಿಗಳಲ್ಲಿ ಯಜಮಾನಿ ಎಂದು ನಮೂದಾಗಿರುವ ಮಹಿಳೆಯರು ಮಾತ್ರ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿದ್ದಾರೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

ಯಜಮಾನಿಯ ಹೆಸರಿನಲ್ಲಿರುವ ರೇಷನ್ ಕಾರ್ಡ್

ಯಜಮಾನಿಯ ಆಧಾರ್ ಕಾರ್ಡ್

ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಪಾಸ್‌ಬುಕ್

    ಯಾರೆಲ್ಲ ಅನರ್ಹರು:
    ಕುಟುಂಬದ ಯಜಮಾನಿ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದರೆ ಈ ಯೋಜನೆಗೆ ಅನರ್ಹರಾಗುತ್ತಾರೆ.
    ಯಜಮಾನಿ ಅಥವಾ ಅವರ ಪತಿ ಜಿಎಸ್‌ಟಿ ಪಾವತಿದಾರರಾಗಿದ್ದರೂ ಯೋಜನೆಯ ಸೌಲಭ್ಯ ಪಡೆಯಲು ಅನರ್ಹರಾಗುತ್ತಾರೆ.