ಗಣಪತಿ ಹಬ್ಬಕ್ಕೆ ನಿರ್ಬಂಧ: ‘ಹಿಂದೂಗಳ ತಂಟೆಗೆ ಹೋದ್ರೆ ಹುಷಾರ್’ ಎಂದ ಆರ್. ಅಶೋಕ್!

ಬೆಂಗಳೂರು: ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ವಿಧಿಸಿರುವ ನಿರ್ಬಂಧಗಳು ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ಗಣಪತಿ ಮೆರವಣಿಗೆ, ಮೆರವಣಿಗೆಯ ಮಾರ್ಗ ಹಾಗೂ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಧನಂಜಯ್ ನೀಡಿರುವ ಎಚ್ಚರಿಕೆ ಕುರಿತು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣೇಶೋತ್ಸವದ ಹಿನ್ನೆಲೆಯಲ್ಲಿ ಟಿ. ನರಸೀಪುರದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ್ದ ಇನ್ಸ್‌ಪೆಕ್ಟರ್ ಧನಂಜಯ್, ಪೊಲೀಸರು ನಿಗದಿಪಡಿಸುವ ಮಾರ್ಗದಲ್ಲೇ ಗಣಪತಿ ಮೆರವಣಿಗೆ ನಡೆಸಬೇಕು ಎಂದು ಸೂಚಿಸಿದ್ದರು. ಮಸೀದಿ ಇರುವ … Continue reading ಗಣಪತಿ ಹಬ್ಬಕ್ಕೆ ನಿರ್ಬಂಧ: ‘ಹಿಂದೂಗಳ ತಂಟೆಗೆ ಹೋದ್ರೆ ಹುಷಾರ್’ ಎಂದ ಆರ್. ಅಶೋಕ್!