ಆರ್ಥಿಕ ಸಾಮಾಜಿಕ ಸಮೀಕ್ಷೆಯಲ್ಲೂ ಬಿಜೆಪಿ ರಾಜಕಾರಣ: ಸಿಎಂ

1
25

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದರು.

Previous articleಹಿಂದೂ ಎನ್ನದ ಸ್ವಾಮೀಜಿಗಳು ಕೇಸರಿ ಬಟ್ಟೆ ತ್ಯಾಗ ಮಾಡಲಿ: ಯತ್ನಾಳ
Next articleಇಂತಹ ಅಂತ್ಯ ನಾನು ನಿರೀಕ್ಷಿಸಿರಲಿಲ್ಲ: ನೀರಜ್ ಭಾವನಾತ್ಮಕ ಸಂದೇಶ

1 COMMENT

  1. ತಲೆಕೆಟ್ಟವನೇ ನೀನು ಮಾಡುತ್ತಿರುವ ಸಮೀಕ್ಷೆ ಜಾತಿ ಜಾತಿಗಳ ನಡುವೆ ಸಂಘರ್ಷ ತರುವಂತಹದ್ದು. ಹಿಂದೂಗಳು ಜಾತಿಗೆ ಕ್ರೈಸ್ತ ಧರ್ಮ ಸೇರಿಸಿದ್ದು ಈಗೆಲ್ಲಾ ಅದೇ ಮುಸ್ಲಿಂ ರನ್ನು ಏಕೆ ಬಿಟ್ಟಿದ್ದೀರಿ. ಭಯಾನಾ. ಧೈರ್ಯ ಇದ್ದಲ್ಲಿ ಅದನ್ನೂ ಪ್ರಯೋಗಿಸು.

LEAVE A REPLY

Please enter your comment!
Please enter your name here