ದೆಹಲಿಯಲ್ಲಿ ಬಾಂಬ್ ಸ್ಫೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಸಿಎಂ ಸೂಚನೆ

0
1

ಮೈಸೂರು: ದೆಹಲಿಯಲ್ಲಿ ಬಾಂಬ್ ಸ್ಫೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ, ಭದ್ರತೆಯನ್ನು ಬಿಗಿಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ದೆಹಲಿ ಸ್ಫೋಟದಲ್ಲಿ ಕೆಲವರು ಸತ್ತಿರುವ ಬಗ್ಗೆ ಮಾಹಿತಿ ಇದೆ. ಮೈಸೂರು ಪೊಲೀಸರೊಂದಿಗೆ ಈಗಾಗಲೇ ಮಾತನಾಡಿದ್ದು, ರಾಜ್ಯ ಮಟ್ಟದ ಐಜಿಪಿ, ಡಿಜಿಪಿಯವರೊಂದಿಗೆ ಕೂಡ ಮಾತನಾಡುತ್ತೇನೆ ಎಂದರು.

ಮೃತರ ಕುಟುಂಬದ ವರ್ಗದವರಿಗೆ ಸಂತಾಪ: ಸ್ಫೋಟದಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಭದ್ರತಾ ಲೋಪವಾಗಿದೆಯೇ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಸ್ಫೋಟದ ಬಗ್ಗೆ ಪೂರ್ಣ ಮಾಹಿತಿ ಇಲ್ಲವಾದ್ದರಿಂದ ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

Previous articleದೆಹಲಿಯಲ್ಲಿ ಬಾಂಬ್‌ ಸ್ಫೋಟ: ಹುಬ್ಬಳ್ಳಿಯಲ್ಲೂ ಹೈ ಅಲರ್ಟ್

LEAVE A REPLY

Please enter your comment!
Please enter your name here