Home ಸುದ್ದಿ ರಾಜ್ಯ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ: ವಿಜಯೇಂದ್ರ

ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ: ವಿಜಯೇಂದ್ರ

0
ಸಾಂದರ್ಭಿಕ ಚಿತ್ರ

ಬೆಂಗಳೂರು: ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನಕ್ಕೆ ಅನುಮತಿ ನೀಡಿದ ಘನ ಉಚ್ಛ ನ್ಯಾಯಾಲಯದ ತೀರ್ಪು ಜನತಂತ್ರದ ವಿಜಯವಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಜಯೇಂದ್ರ ಪೋಸ್ಟ್‌ ಮಾಡಿದ್ದು ಪ್ರಜಾತಂತ್ರದ ಹಕ್ಕು ಕಸಿಯಲು ಹೊರಟ ಕಾಂಗ್ರೆಸ್‌ ಸರ್ಕಾರಕ್ಕೆ ಉಚ್ಛ ನ್ಯಾಯಾಲಯ ಚಾಟಿ ಬೀಸಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿದಿದೆ.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಿರ್ಬಂಧಿಸಲು ಹೊರಟವರಿಗೆ ಮುಖಭಂಗವಾಗಿದೆ. ಇಂದಿನ ನ್ಯಾಯಾಲಯದ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವಾಧಿಕಾರಿ ಆಡಳಿತ ನಡೆಸಲು ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶ ಸಾರಿದೆಯಲ್ಲದೇ, ದಿನಬೆಳಗಾದರೆ ಸಂವಿಧಾನದ ಬಗ್ಗೆ ಬೊಗಳೆ ಮಾತನಾಡುವವರಿಗೆ ತಕ್ಕ ಪಾಠ ಹೇಳಿದೆ.

ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳಿಗೆ ಕಾನೂನು ಸುವ್ಯವಸ್ಥೆಯ ಷರತ್ತು ವಿಧಿಸಿ ಅನುಮತಿ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ, ಆದರೆ ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಸಿರುಗಟ್ಟಿಸಲು ಹೋದರೆ ದೇಶದ ಸಂವಿಧಾನ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂಬ ಸಂದೇಶ ಇಂದಿನ ತೀರ್ಪಿನ ಮೂಲಕ ರವಾನೆಯಾಗಿದೆ, ರಾಷ್ಟ್ರಭಕ್ತ ಸಂಘಟನೆಗಳನ್ನು ಮೆಟ್ಟಿ ನಿಲ್ಲುವ ಕಾಂಗ್ರೆಸ್ ನ ಕುಟಿಲ ನೀತಿಯು ನ್ಯಾಯಾಲಯದ ತೀರ್ಪಿನಿಂದ ನಿಷ್ಕ್ರಿಯಗೊಂಡಂತಾಗಿದೆ ಎಂದಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version