Home Advertisement
Home ಸುದ್ದಿ ರಾಜ್ಯ ಕೆನಡಾ ಶೂಟೌಟ್ ಪ್ರಕರಣ: ಕನ್ನಡಿಗ ಚಂದನ್ ಕುಮಾರ್ ಪಾರ್ಥಿವ ಶರೀರ ಭಾರತಕ್ಕೆ

ಕೆನಡಾ ಶೂಟೌಟ್ ಪ್ರಕರಣ: ಕನ್ನಡಿಗ ಚಂದನ್ ಕುಮಾರ್ ಪಾರ್ಥಿವ ಶರೀರ ಭಾರತಕ್ಕೆ

0
56

ಬೆಂಗಳೂರು: ಕೆನಡಾದಲ್ಲಿ ಗುಂಡಿನ ದಾಳಿಗೆ ಬಲಿಯಾದ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ ಅವರ ಪಾರ್ಥಿವ ಶರೀರ ಫೆಬ್ರವರಿ 16ರಂದು ತಾಯ್ನಾಡಿಗೆ ಆಗಮಿಸಲಿದೆ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕೆನಡಾದ ಟೊರಾಂಟೋ ನಗರದಲ್ಲಿ ಫೆಬ್ರವರಿ 7ರಂದು ನಡೆದ ಶೂಟೌಟ್ ಘಟನೆಯಲ್ಲಿ ಚಂದನ್ ಕುಮಾರ್ ಹತ್ಯೆಗೀಡಾಗಿದ್ದು, ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ನಡೆದ ಪ್ರಯತ್ನಗಳು ಯಶಸ್ವಿಯಾಗಿರುವುದು ಸಮಾಧಾನ ತಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ವಿರುದ್ಧ ನಿರ್ಣಯಕ್ಕೆ ಬ್ರೇಕ್: ಸಮಿತಿಗೆ ಒಪ್ಪಿಸುವ ಸಾಧ್ಯತೆ

ಭಾರತ ಸರ್ಕಾರದ ವಿದೇಶಾಂಗ ಸಚಿವಾಲಯ ಇ-ಮೇಲ್ ಮೂಲಕ ಮಾಹಿತಿ ನೀಡಿದ್ದು, ಚಂದನ್ ಕುಮಾರ್ ಅವರ ಪಾರ್ಥಿವ ಶರೀರ ಫೆಬ್ರವರಿ 14ರಂದು ಕೆನಡಾದಿಂದ ಹೊರಟು, ನವದೆಹಲಿಯ ಮೂಲಕ ಫೆಬ್ರವರಿ 16ರಂದು ಬೆಳಿಗ್ಗೆ ಸುಮಾರು 8:30ರ ವೇಳೆಗೆ ಬೆಂಗಳೂರಿಗೆ ತಲುಪಲಿದೆ ಎಂದು ತಿಳಿಸಿದ್ದಾರೆ.

“ನೂರು ಕಾಲ ಬಾಳಿ ಬದುಕಬೇಕಾದ ಮಗನನ್ನು ಕಳೆದುಕೊಂಡ ಹೆತ್ತವರಿಗೆ ಅವರ ಜೀವವನ್ನು ಮರಳಿ ತಂದುಕೊಡುವ ಶಕ್ತಿ ನಮಗಿಲ್ಲ. ಆದರೆ ತಮ್ಮ ಮಗನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಸಂಪ್ರದಾಯದಂತೆ ತಾಯ್ನಾಡಿನಲ್ಲಿ ಅಂತಿಮ ಸಂಸ್ಕಾರ ಮಾಡುವ ಅವಕಾಶ ಒದಗಿಸುವುದು ನನ್ನ ಕರ್ತವ್ಯ ಎಂದು ಭಾವಿಸಿದ್ದೆ” ಎಂದು ಡಾ. ಸುಧಾಕರ್ ಭಾವುಕರಾಗಿ ಹೇಳಿದ್ದಾರೆ.

ಇದನ್ನೂ ಓದಿ: ಬೇಡ್ತಿ- ವರದಾ ನದಿ ಜೋಡಣೆ: ಸರ್ಕಾರಕ್ಕೆ ವರದಿ ಕೇಳಿದ ಸೆಂಟ್ರಲ್ ಎಂಪಾ ವರ್ಡ್ ಕಮಿಟಿ

ಈ ಸಂದರ್ಭದಲ್ಲಿ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್, ವಿದೇಶಾಂಗ ಸಚಿವಾಲಯ ಹಾಗೂ ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಚಂದನ್ ಕುಮಾರ್ ಅವರ ಪೋಷಕರು, ಕುಟುಂಬ ಸದಸ್ಯರು ಹಾಗೂ ಸಮಸ್ತ ಕರ್ನಾಟಕದ ಜನತೆಯ ಪರವಾಗಿ ಕೃತಜ್ಞತೆ ವ್ಯಕ್ತಪಡಿಸಿರುವುದಾಗಿ ಅವರು ತಿಳಿಸಿದ್ದಾರೆ.

Previous articleಬೇಡ್ತಿ- ವರದಾ ನದಿ ಜೋಡಣೆ: ಸರ್ಕಾರಕ್ಕೆ ವರದಿ ಕೇಳಿದ ಸೆಂಟ್ರಲ್ ಎಂಪಾ ವರ್ಡ್ ಕಮಿಟಿ
Next articleಅಯ್ಯಪ್ಪ ಸ್ವಾಮಿ ಬಂಗಾರ ಕಳವು ಪ್ರಕರಣ: ಬಳ್ಳಾರಿಗೆ ಮತ್ತೆ ಆಗಮಿಸಿದ ಕೇರಳ SIT ತಂಡ