SK Home Ad
Home ಸುದ್ದಿ ರಾಜ್ಯ ‘ನೀವು ನನಗೆ ಸಹೋದರಿಯರಿದ್ದಂತೆ, ಹೋರಾಟ ಕೈಬಿಡಿ’: ಆಶಾ ಕಾರ್ಯಕರ್ತೆಯರಿಗೆ ಸಿಎಂ ಭಾವನಾತ್ಮಕ ಮನವಿ

‘ನೀವು ನನಗೆ ಸಹೋದರಿಯರಿದ್ದಂತೆ, ಹೋರಾಟ ಕೈಬಿಡಿ’: ಆಶಾ ಕಾರ್ಯಕರ್ತೆಯರಿಗೆ ಸಿಎಂ ಭಾವನಾತ್ಮಕ ಮನವಿ

0
5

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಪರವಾಗಿ ಭಾವನಾತ್ಮಕ ಮನವಿ ಮಾಡಿದ್ದಾರೆ. ನಿಮ್ಮ ಹೋರಾಟದ ನೋವು ಮತ್ತು ಸಂಕಷ್ಟ ಅರ್ಥವಾಗುತ್ತದೆ. ನೀವು ನನಗೆ ಕೇವಲ ಆಶಾ ಕಾರ್ಯಕರ್ತೆಯರಲ್ಲ, ನನ್ನ ಸಹೋದರಿಯರಿದ್ದಂತೆ. ದಯವಿಟ್ಟು ನನ್ನ ಮನವಿಗೆ ಸ್ಪಂದಿಸಿ ಹೋರಾಟ ಕೈಬಿಡಿ ಎಂದು ಅವರು ಮನವಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕುಟುಂಬದವರನ್ನು ಬಿಟ್ಟು ಹಗಲು-ರಾತ್ರಿ ಎನ್ನದೆ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿರುವುದು ಮನಸ್ಸಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಸಮಗ್ರ ಹಾಗೂ ಶಾಶ್ವತ ಪರಿಹಾರ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಸಚಿವ ಸಂಪುಟದೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ನಿಮ್ಮೊಂದಿಗಿದೆ ಎಂದು ಭರವಸೆ ನೀಡಿದ್ದಾರೆ.

ಒಬ್ಬ ಅಣ್ಣನಾಗಿ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ದಯವಿಟ್ಟು ನನ್ನ ಮನವಿಗೆ ಸ್ಪಂದಿಸಿ ಹೋರಾಟವನ್ನು ಕೈಬಿಡಿ. ನಿಮ್ಮ ಸೇವೆ, ಶ್ರಮ ಮತ್ತು ತ್ಯಾಗವನ್ನು ಸರ್ಕಾರ ಗೌರವಿಸುತ್ತದೆ. ನಿಮ್ಮ ಬೇಡಿಕೆಗಳಿಗೆ ಸ್ಪಂದಿಸಿ ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.