SK Home Ad
Home ಸುದ್ದಿ ರಾಜ್ಯ ದೇಶದಲ್ಲಿ ಅರಾಜಕತೆ ಸೃಷ್ಟಿಸುವುದೇ ಸಿಜೆಪಿಯ ಉದ್ದೇಶ

ದೇಶದಲ್ಲಿ ಅರಾಜಕತೆ ಸೃಷ್ಟಿಸುವುದೇ ಸಿಜೆಪಿಯ ಉದ್ದೇಶ

0
48

ಶಿವಮೊಗ್ಗ: ಜೆನ್ ಝಿ ಮತ್ತು ಕಾಕ್ರೋಚ್ ಪಾರ್ಟಿ ಎರಡೂ ಬೇರೆ ಬೇರೆ. ಸಿಜೆಪಿಯ ಉದ್ದೇಶ ದೇಶದಲ್ಲಿ ಅರಾಜಕತೆ ಸೃಷ್ಟಿಸೋದು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಕುರಿತಂತೆ ಚುನಾವಣಾ ಆಯೋಗದ ಎಲ್ಲಾ ಕ್ರಮಗಳನ್ನು ಸಮರ್ಥಿಸುವುದು ತಮ್ಮ ಉದ್ದೇಶವಲ್ಲ ಎಂದರು.

ರಾಜ್ಯದಲ್ಲಿ ಶೇ 82ರಷ್ಟು ಬೆಳೆ ನಾಶವಾಗಿದೆ ಎಂದು ಕಂದಾಯ ಸಚಿವರೇ ತಿಳಿಸಿದ್ದಾರೆ. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್‌ಎಫ್)ಯಡಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಲಾಗಿತ್ತು.

ಆದರೆ, ಸರ್ಕಾರ 2,500 ರೂ. ಮಾತ್ರ ಘೋಷಿಸಿದ್ದು, ಆ ಹಣವೂ ರೈತರ ಖಾತೆಗೆ ಜಮೆಯಾಗಿಲ್ಲ. ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ಅಧಿ ವೇಶನ ಕರೆಯಬೇಕು ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕೆಂಬುದು ಹಲವು ವರ್ಷಗಳ ಹೋರಾಟವಾಗಿತ್ತು. ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸ ಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಪ್ರಸ್ತುತ ಸರ್ಕಾರ ನ್ಯಾಯಾಲಯದಲ್ಲಿ ಈ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ದೂರಿದರು.