SK Home Ad
Home ಸುದ್ದಿ ರಾಜ್ಯ ಸಿಎಂ ಡಿಕೆಶಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಸಮಾಲೋಚನೆ

ಸಿಎಂ ಡಿಕೆಶಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಸಮಾಲೋಚನೆ

0
4

ನವದೆಹಲಿ: ರಾಜ್ಯ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪರಸ್ಪರ ಸಮಾಲೋಚನೆ ನಡೆಸಿದ್ದಾರೆ.

ಸೋಮವಾರ ರಾತ್ರಿ ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಈರ್ವರೂ ಮುಕ್ತ ಚರ್ಚೆ ನಡೆಸಿದರು.

ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಹಾಗೂ ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ನಿಗದಿ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಪರಸ್ಪರ ಸಮಾಲೋಚನೆ ನಡೆಸಿದರು.

ದೆಹಲಿಯಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಕಬ್ಬು ಬೆಳೆಗಾರರ ಸಭೆಗೆ ಆಗಮಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಿಎಂಗೆ ಆಹ್ವಾನ ನೀಡಿದ್ದರು. ಆದರೆ ಕಾರಣಾಂತರದಿಂದ ಸಿಎಂ ಸಭೆಗೆ ಹಾಜರಾಗದೇ ತಮ್ಮ ಪರವಾಗಿ ಮೂವರು ಸಚಿವರನ್ನು ಕಳುಹಿಸಿಕೊಟ್ಟಿದ್ದರು.

ಸಭೆಯ ಬಳಿಕ ಸಿಎಂ ಡಿಕೆಶಿ ಅವರು ಪ್ರಲ್ಹಾದ ಜೋಶಿ ಅವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಚರ್ಚಿಸಿದರಲ್ಲಿದೆ, ರಾಜ್ಯ ಸರ್ಕಾರದಿಂದ SAP ಕಲ್ಪಿಸುವಂತೆ ಸಲಹೆ ನೀಡಿದರು.