SK Home Ad
Home ಸುದ್ದಿ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿಗೆ 5 ಸಾವಿರ ಕೋಟಿ ಮೀಸಲು

ಅಲ್ಪಸಂಖ್ಯಾತರ ಅಭಿವೃದ್ಧಿಗೆ 5 ಸಾವಿರ ಕೋಟಿ ಮೀಸಲು

0
60

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೂಲಕ ಮುಸ್ಲಿಂ, ಕ್ರೈಸ್ತ, ಜೈನ, ಸಿಖ್ ಮತ್ತು ಬೌದ್ಧ ಹಾಗೂ ಮುಸ್ಲಿಂ ಸಮುದಾಯಗಳ ಅಭಿವೃದ್ಧಿಗಾಗಿ ಸುಮಾರು ₹5 ಸಾವಿರ ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ” ಎಂದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಶಿವಾಜಿನಗರದ ಸೆಂಟ್ ಮೇರಿಸ್ ಬ್ಯಾಸಿಲಿಕಾ ಚರ್ಚ್‌ನ ವಾರ್ಷಿಕೋತ್ಸವದ ಅಂಗವಾಗಿ ʻಆರೋಗ್ಯ ಮಾತೆʼಯ ರಥೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್ ಸೇರಿದಂತೆ ಎಲ್ಲ ಧರ್ಮದವರು ತಮ್ಮದೇ ಆದ ನಂಬಿಕೆ ಮತ್ತು ಸಂಪ್ರದಾಯಗಳನ್ನು ಪಾಲಿಸುತ್ತಿದ್ದಾರೆ. ಇದು ಪ್ರತಿಯೊಬ್ಬರ ವೈಯಕ್ತಿಕ ನಂಬಿಕೆಯಾಗಿದ್ದು, ಪರಸ್ಪರ ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ” ಎಂದರು.

ಸಮಾಜದ ಎಲ್ಲ ವರ್ಗಗಳನ್ನೂ ಆರ್ಥಿಕವಾಗಿ ಸಬಲಗೊಳಿಸುವುದು ಸರ್ಕಾರದ ಗುರಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಭೂಮಿ ಗ್ಯಾರಂಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ ಎಂದು ತಿಳಿಸಿದರು.

ಇನ್ನೂ ಹಲವು ಕಾರ್ಯಕ್ರಮಗಳ ಘೋಷಣೆ: “ಸೆಪ್ಟೆಂಬರ್ 10ರಂದು ನನ್ನ ಸರ್ಕಾರ 100 ದಿನಗಳನ್ನು ಪೂರೈಸಲಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು ಎಂಬುದರ ಕುರಿತು ಹಲವು ಮಹತ್ವದ ಕಾರ್ಯಕ್ರಮಗಳನ್ನು ಈಗಾಗಲೇ ಘೋಷಿಸಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ಘೋಷಿಸಲು ಸಿದ್ಧತೆ ಮಾಡಿಕೊಂಡಿದ್ದೇನೆ” ಎಂದರು.

“ಎಲ್ಲ ಧರ್ಮಗುರುಗಳು ಮತ್ತು ಭಕ್ತರು ಸರ್ಕಾರದೊಂದಿಗೆ ಕೈಜೋಡಿಸಿ ಶಾಂತಿ, ಸೌಹಾರ್ದ ಹಾಗೂ ಸಹಬಾಳ್ವೆಯನ್ನು ಬಲಪಡಿಸಬೇಕು. ಎಲ್ಲ ಧರ್ಮಗಳ ಧ್ವಜಗಳು ಬೇರೆ ಇರಬಹುದು. ಆದರೆ ನಮ್ಮ ಗುರಿ ಒಂದೇ — ಶಾಂತಿ, ಸಾಮರಸ್ಯ ಮತ್ತು ಮಾನವೀಯತೆ. ಸರ್ವರಿಗೂ ಸಮಬಾಳು, ಸಮಪಾಲು ಎಂಬ ಸಂವಿಧಾನದ ಆಶಯದೊಂದಿಗೆ ಕರ್ನಾಟಕವನ್ನು ಶಾಂತಿಯ ತೋಟವನ್ನಾಗಿ ಕಟ್ಟೋಣ” ಎಂದರು.