ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವ

ಬೆಂಗಳೂರು: “ಬಸವಣ್ಣನವರಿಗೆ ಅಪಮಾನ ಮಾಡಿರುವ ‘ಬಸವ ಮಂಟಪ’ ಪುಸ್ತಕದ ಹಿನ್ನೆಲೆಯಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈಗಾಗಲೇ ಪುಸ್ತಕದ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮಾರ್ಗದರ್ಶನ ನೀಡಲಾಗಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವದ ಸಂಗತಿ. ಬಸವಣ್ಣನವರನ್ನು ನಾವು ಸಾಂಸ್ಕೃತಿಕ ನಾಯಕರೆಂದು ಗೌರವಿಸುತ್ತೇವೆ. ಅವರ ಆಚಾರ-ವಿಚಾರ ಹಾಗೂ ತತ್ವಾದರ್ಶಗಳನ್ನು ನಮ್ಮ ಸರ್ಕಾರ ಅಳವಡಿಸಿಕೊಳ್ಳುತ್ತಿದೆ. ಬಸವಣ್ಣನವರ … Continue reading ಬಸವಣ್ಣನವರಿಗೆ ಅಪಮಾನವಾಗಿರುವುದು ಕರ್ನಾಟಕಕ್ಕೆ ದೊಡ್ಡ ಅಗೌರವ