SK Home Ad
Home ಸುದ್ದಿ ರಾಜ್ಯ ಹೋರಾಟದ ಶ್ರೇಯಸ್ಸು ಸಿಗದ ಹತಾಶೆಯಿಂದ ಕಾಂಗ್ರೆಸ್ ಆರೋಪ

ಹೋರಾಟದ ಶ್ರೇಯಸ್ಸು ಸಿಗದ ಹತಾಶೆಯಿಂದ ಕಾಂಗ್ರೆಸ್ ಆರೋಪ

0
61

ನವದೆಹಲಿ: ಯುವಕರು ಮತ್ತು ವಿದ್ಯಾರ್ಥಿಗಳು ನಡೆಸಿದ ಹೋರಾಟದ ಶ್ರೇಯಸ್ಸು ತಮಗೆ ಸಿಗಲಿಲ್ಲವೆಂಬ ಹತಾಶೆಯಿಂದ ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರು ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ​ಪ್ರಹ್ಲಾದ್ ಜೋಶಿ ಅವರು ಶಿಕ್ಷಣ ಸಚಿವಾಲಯದ ಹೊಣೆ ವಹಿಸಿಕೊಂಡಾಗಿನಿಂದ ಕಾಂಗ್ರೆಸ್ ನಾಯಕರು ಅವರನ್ನು ಅನಗತ್ಯವಾಗಿ ಹಾಗೂ ಅನ್ಯಾಯವಾಗಿ ಗುರಿ ಮಾಡುತ್ತಿದ್ದಾರೆ. ಪ್ರತಿಪಕ್ಷದ ನಾಯಕರೊಬ್ಬರು ಈ ಹಂತಕ್ಕೆ ಇಳಿದು ಮಾತನಾಡುವುದು ಶೋಭೆಯಲ್ಲ ಎಂದು ಕಿಡಿಕಾರಿದ್ದಾರೆ.

​ಕಾಂಗ್ರೆಸ್ ಹತಾಶೆ: ವಿದ್ಯಾರ್ಥಿ ಹೋರಾಟದ ಶ್ರೇಯಸ್ಸು ಸಿಗದ ಕಾರಣ ಕಾಂಗ್ರೆಸ್ ನಾಯಕರು ಕಂಗಾಲಾಗಿದ್ದಾರೆ. ಪ್ರಹ್ಲಾದ್ ಜೋಶಿ ಶಿಕ್ಷಣ ಸಚಿವರಾದ ಮೇಲಿಂದ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಈ ಸರ್ಕಾರ ತಂದಿರುವ ಸುಧಾರಣೆಗಳನ್ನು ಅವರಿಗೆ ಒಪ್ಪಿಕೊಳ್ಳಲು ಆಗುತ್ತಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಅವರ ಮಾತನ್ನು ಯಾರೂ ಒಪ್ಪುವುದಿಲ್ಲ. ನಾವು ಇದನ್ನು ಖಂಡಿಸುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.