Home Advertisement
Home ಸುದ್ದಿ ರಾಜ್ಯ ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು

ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು

0
215

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿ, ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಬ್ದುಲ್ ಜಬ್ಬಾರ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿಗೆ ವಿರುದ್ಧವಾಗಿ ಕೆಲಸ ಮಾಡಿದ್ದು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಸಂಬಂಧ ಕೆಪಿಸಿಸಿ ಶಿಸ್ತು ಸಮಿತಿಗೆ ಹಲವು ದೂರುಗಳು ಸಲ್ಲಿಕೆಯಾಗಿದ್ದವು.

ಅಧಿಕೃತ ಪ್ರಕಟಣೆ : ಕಾಂಗ್ರೆಸ್ ಪಕ್ಷದ ಪ್ರಕಟಣೆಯಲ್ಲಿ, “ಬೆಂಗಳೂರಿನ ಬೆನ್ಸನ್ ಟೌನ್ ನಿವಾಸಿಯಾದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ದಾವಣಗೆರೆ ದಕ್ಷಿಣ ಉಪಚುನಾವಣೆಯ ವೇಳೆ ನಡೆಸಿದ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ಸ್ಪಷ್ಟಪಡಿಸಲಾಗಿದೆ.

ಆಂತರಿಕ ಶಿಸ್ತು ಕ್ರಮ : ಪಕ್ಷದ ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಉಪಚುನಾವಣೆಯಲ್ಲಿ ಪಕ್ಷದ ಸೋಲಿನ ಹಿನ್ನೆಲೆ ಈ ಕ್ರಮ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

https://www.youtube.com/watch?v=e95H-z4YGNo