ದಸರಾ 2025: ಶಾಲೆಗಳ ರಜೆ ವಿಸ್ತರಣೆ, ಆದೇಶದ ವಿವರ

0
89

ದಸರಾ 2025ರ ಅಂಗವಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಕರ್ನಾಟಕ ಸರ್ಕಾರ ವಿಸ್ತರಣೆ ಮಾಡಿದೆ. ಈ ಕುರಿತು ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು ಜ್ಞಾಪನಾ ಪತ್ರವನ್ನು ಹೊರಡಿಸಿದೆ.

ಕಾಲಕಾಲಕ್ಕೆ ಸರ್ಕಾರದಿಂದ ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ ಎಂದು ಪತ್ರದಲ್ಲಿ ಸುರಲ್ಕ‌ರ್ ವಿಕಾಸ ಕಿಶೋರ್, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ತಿಳಿಸಿದ್ದಾರೆ.

ಈ ಜ್ಞಾಪನಾ ಪತ್ರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜ ಮತ್ತು ಶಿಕ್ಷಣಿಕ ಸ್ಥಿತಿಗಳ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ವಿಸ್ತರಿಸಿದ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ, ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಮರು ನಿಗದಿ ಮಾಡಿ ಆದೇಶಿಸಲಾಗಿತ್ತು.

ಮುಂದುವರೆದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ಅವರು ಸನ್ಮಾನ್ಯ ಮುಖ್ಯ ಮಂತ್ರಿಗಳವರಿಗೆ ನೀಡಿದ ಮನವಿ ಪತ್ರ ದಿನಾಂಕ 06-10-2025ರಲ್ಲಿ ಮಾನ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ ಇವರು ನಮೂದಿಸಿದ ಟಿಪ್ಪಣಿಯಲ್ಲಿ ಸದರಿ ಮನವಿ ಕುರಿತು ಮಾನ್ಯ ಮುಖ್ಯಮಂತ್ರಿಗಳು ನೀಡುವ ಸೂಚನೆಯಂತೆ ಕ್ರಮವಹಿಸಿ ಎಂದು ನಿರ್ದೇಶಿಸಿರುತ್ತಾರೆ.

ಸದರಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು ಅವರ ಸಮೀಕ್ಷೆಯ ಕಾರ್ಯವನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಅವಶ್ಯಕವಿದ್ದು ಸಮೀಕ್ಷೆಯನ್ನು ಪೂರ್ಣಗೊಳಿಸಲು ಶಾಲೆಗಳಿಗೆ ಹೆಚ್ಚುವರಿ ದಸರಾ ರಜೆಗಳನ್ನು ನೀಡಿ ಸಮೀಕ್ಷೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿರುತ್ತಾರೆ. ಹಾಗೂ ವಿದ್ಯಾರ್ಥಿಗಳಿಗೆ ಮುಂದೆ ವಿಶೇಷ ಬೋಧನಾ ಅವಧಿಗಳನ್ನು ನಡೆಸಲಾಗುವುದು ಎಂದಿರುತ್ತಾರೆ.

ಈ ಕುರಿತು ದಿನಾಂಕ 07-10-2025ರಂದು ವಿಧಾನ ಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ, ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸನ್ಮಾನ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳ ಹಿನ್ನೆಲೆಯಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಲಾಗಿದೆ.

  • ಬೆಂಗಳೂರು ನಗರ ಮತ್ತು ರಾಜ್ಯದ ಇತರ ಎಲ್ಲ ಜಿಲ್ಲೆಗಳಲ್ಲಿ ನಡೆಯುತ್ತಿರುವ ಸಮೀಕ್ಷೆ ಕಾರ್ಯವನ್ನು ಶಿಕ್ಷಕರು ಪೂರ್ಣಗೊಳಿಸುವುದಕ್ಕೆ ರಾಜ್ಯದ ರಾಜ್ಯ ಪಠ್ಯಕ್ರಮದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ದಸರಾ ರಜೆ ಅವಧಿಯನ್ನು ದಿನಾಂಕ 18-10-2025ರ ವರೆಗೆ ವಿಸ್ತರಿಸಲಾಗಿದೆ.
  • ಶಿಕ್ಷಕರು ಸಮೀಕ್ಷೆ ಕಾರ್ಯವನ್ನು ದಿ.19/10/2025ರೊಳಗೆ ಪೂರ್ಣಗೊಳಿಸಬೇಕು. ಅವಧಿಯಲ್ಲಿ ಮಕ್ಕಳ ಕಲಿಕೆಗೆ ಉಂಟಾಗುವ ಕೊರತೆಯ ಅವಧಿಯನ್ನು ರಜಾ ದಿನಗಳ ನಂತರ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸುವುದು.
  • 12/10/2025ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಮಧ್ಯಾವಧಿ ಪರೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡ ಉಪನ್ಯಾಸಕರನ್ನು ಸಮೀಕ್ಷಾ ಕಾರ್ಯದಿಂದ ಬಿಡುಗಡೆಗೊಳಿಸುವುದು.
Previous articleಕುರುಬರಿಗೆ ಯಾವುದೇ ಸಮುದಾಯದ ಮೀಸಲಾತಿ ಕಿತ್ತುಕೊಂಡು ನೀಡುವುದಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
Next articleನಮ್ಮ ಮೆಟ್ರೋದ ಕೆಂಪು ಮಾರ್ಗ: ಬೆಂಗಳೂರಿನ ಸಂಚಾರಕ್ಕೆ ಹೊಸ ದಿಕ್ಕು!

LEAVE A REPLY

Please enter your comment!
Please enter your name here