Home Advertisement
Home ಸುದ್ದಿ ರಾಜ್ಯ ಖಾಸಗಿ ಬಂಕ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 25 ರೂ. ತುಟ್ಟಿ

ಖಾಸಗಿ ಬಂಕ್‌ನಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 25 ರೂ. ತುಟ್ಟಿ

0
6

ಬೆಂಗಳೂರು: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದ ಹಿನ್ನೆಲೆ ಖಾಸಗಿ ತೈಲ ಕಂಪನಿಗಳಾದ ನಯಾರಾ ಎನರ್ಜಿ, ಶೆಲ್ ಇಂಡಿಯಾ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದೆ.

ಬೆಂಗಳೂರಿನ ಶೆಲ್ ಬಂಕ್‌ಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 7.41 ರೂ.ಗಳಷ್ಟು ಏರಿಕೆಯಾಗಿದ್ದು, ಸಾಮಾನ್ಯ ಪೆಟ್ರೋಲ್ 119.85 ರೂ.ಗಳಿದ್ದರೆ, ಪವರ್ ಪೆಟ್ರೋಲ್ 129.85 ರೂ.ಗೆ ಏರಿಕೆ ಆಗಿದೆ.

ಪೆಟ್ರೋಲ್‌ಗಿಂತಲೂ ಹೆಚ್ಚಾಗಿ ಖಾಸಗಿ ಬಂಕ್‌ಗಳಲ್ಲಿ ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಪ್ರತಿ ಲೀಟರ್ ಡೀಸೆಲ್ ಮೇಲೆ 25.01 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ವಾಹನ ಸವಾರರು ಕಂಗಾಲಾಗಿದ್ದಾರೆ. ಸಾಮಾನ್ಯ ಡೀಸೆಲ್ 123.52 ರೂ.ಗಳು, ಪ್ರೀಮಿಯಂ ಡೀಸೆಲ್ 133.52 ರೂ.ಗೆ ಮಾರಾಟವಾಗುತ್ತಿದೆ. ಇರಾನ್ ಯುದ್ಧದ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಕಚ್ಚಾ ತೈಲದ ದರ ಏರಿಕೆಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 148 ರೂಪಾಯಿಯಿಂದ 165 ರೂಪಾಯಿವರೆಗೂ ತಲುಪುವ ಸಾಧ್ಯತೆಯಿದೆ ಎಂದು ಮಾರುಕಟ್ಟೆಯ ಮೂಲಗಳು ಅಂದಾಜಿಸಿವೆ. ಆದರೆ, ಈ ಬಗ್ಗೆ ಕಂಪನಿಗಳಿಂದ ಯಾವುದೇ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ. ಜನರು ಖಾಸಗಿ ಬಂಕ್‌ಗಳತ್ತ ಹೋಗುವುದನ್ನು ಕಡಿಮೆ ಮಾಡಿದ್ದಾರೆ.