SK Home Ad
Home ಸುದ್ದಿ ರಾಜ್ಯ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ತಲುಪಬೇಕು: ಸಿಎಂ

ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ತಲುಪಬೇಕು: ಸಿಎಂ

0
68

ಬೆಂಗಳೂರು: ದೇಶದಲ್ಲಿ ಪೋಲಿಯೋ ಮುಕ್ತ ಸಮಾಜ ನಿರ್ಮಿಸುವ ಉದ್ದೇಶದಿಂದ ರಾಜ್ಯಾದ್ಯಂತ ಭಾನುವಾರ ಹಮ್ಮಿಕೊಳ್ಳಲಾದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು. ರಾಜ್ಯದ ಎಲ್ಲ ಭಾಗಗಳಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ತಲುಪಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಭಾರತದಲ್ಲಿ ಪೋಲಿಯೋ ನಿರ್ಮೂಲನೆಗೆ 1972ರಲ್ಲೇ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮುನ್ನುಡಿ ಬರೆದಿದ್ದರು ಎಂದು ಸ್ಮರಿಸಿದರು. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಲಸಿಕಾ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಗಂಡು ಮಗು ಜನಿಸಿದ ಸಂಭ್ರಮಕ್ಕೆ ಪಾರ್ಟಿ ಕೇಳಿದ್ದಕ್ಕೆ ಸ್ನೇಹಿತನ ಕೊಲೆ

ಅಕ್ಕಪಕ್ಕದ ಕೆಲವು ದೇಶಗಳಲ್ಲಿ ಇಂದಿಗೂ ಪೋಲಿಯೋ ಸಮಸ್ಯೆ ಮುಂದುವರಿದಿರುವುದರಿಂದ, ರಾಜ್ಯದಲ್ಲಿ ಈ ರೋಗ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದು ಮುಖ್ಯಮಂತ್ರಿ ಎಚ್ಚರಿಸಿದರು. ಹೀಗಾಗಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

ಆರೋಗ್ಯ ಸಚಿವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಪ್ರಶಂಸಿಸಿದರು. ವಿಶೇಷವಾಗಿ ಹಳ್ಳಿ, ಗುಡ್ಡಗಾಡು ಹಾಗೂ ದುರ್ಗಮ ಪ್ರದೇಶಗಳಲ್ಲಿರುವ ಪ್ರತಿಯೊಂದು ಮಗುವಿಗೂ ಲಸಿಕೆ ತಲುಪಿಸುವ ನಿಟ್ಟಿನಲ್ಲಿ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಪ್ರೇಮ ವೈಫಲ್ಯ: ಚಲಿಸುತ್ತಿದ್ದ ಕಾರಿನಲ್ಲಿ ಸ್ಫೋಟ, ಯುವಕ ಸಜೀವ ದಹನ, ಯುವತಿ ಗಂಭೀರ ಗಾಯ

ರಾಜ್ಯದಾದ್ಯಂತ ಸಾವಿರಾರು ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂಸೇವಕರು ಈ ಅಭಿಯಾನದಲ್ಲಿ ಭಾಗವಹಿಸಿದ್ದು, ಪೋಲಿಯೋ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ.