ಬೆಂಗಳೂರು: ಕರ್ನಾಟಕದಲ್ಲಿ ‘ನಾಯಕತ್ವ ಬದಲಾವಣೆ’ ಮತ್ತು ಸಂಪುಟ ಪುನರ್‌ರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಇಂದಿನ ಸಾಮಾಜಿಕ ಜಾಲತಾಣದ ಪೋಸ್ಟ್ ಹೊಸ ಕುತೂಹಲಕ್ಕೆ ಕಾರಣವಾಗಿದೆ.
ಗುರುವಾರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್ ರಾಜಕೀಯ ವಲಯದಲ್ಲಿ ಹಲವಾರು ಅರ್ಥವ್ಯಾಖ್ಯಾನಗಳಿಗೆ ಕಾರಣವಾಗಿದೆ. ಪೋಸ್ಟ್‌ನಲ್ಲಿ ಡಿಕೆಶಿ ಅವರು ಹೀಗೆ ಬರೆದಿದ್ದಾರೆ: “Word power is world power. ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ಅಧ್ಯಕ್ಷರಾಗಲಿ ಅಥವಾ ನಾನೂ ಸೇರಿದಂತೆ ಬೇರೆ ಯಾರೇ ಆಗಿರಲಿ ಹೇಳಿದಂತೆ ನಡೆದುಕೊಳ್ಳಬೇಕು ಎಂದಿದ್ದಾರೆ.
ರಾಜ್ಯದ ರಾಜಕೀಯದಲ್ಲಿ ಈಗಾಗಲೇ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳು ಗರಿಗೆದರಿರುವ ಸಂದರ್ಭದಲ್ಲಿ, ಅವರ ಈ ಹೇಳಿಕೆಯನ್ನು ಹಲವರು “ಸಂದೇಶ” ಮತ್ತು “ರಾಜಕೀಯ ಅರ್ಥ” ಹೊಂದಿದೆ ಎಂದು ವಿಶ್ಲೇಷಿಸುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್‌ನೊಳಗೆ ನಾಯಕತ್ವ ಬದಲಾವಣೆ. ಸಿಎಂ ಸ್ಥಾನಕ್ಕೆ ಸ್ಪರ್ಧೆ. ಸಂಪುಟ ಪುನರ್‌ರಚನೆಯಂತಹ ಪ್ರಬಲ ಚರ್ಚೆಯಲ್ಲಿರುವ ಹಿನ್ನೆಲೆಯಲ್ಲಿ, ಡಿಕೆಶಿ ಅವರ ಈ ಹೇಳಿಕೆ ಪಕ್ಷದ ನಡೆಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.
ಪಕ್ಷದ ನಾಯಕರು ಮತ್ತು ಬೆಂಬಲಿಗರು ತಮ್ಮದೇ ರೀತಿಯಲ್ಲಿ ಈ ಹೇಳಿಕೆಯನ್ನು ವಿಶ್ಲೇಷಿಸುತ್ತಿದ್ದು, ಕಾಂಗ್ರೆಸ್‌ನಲ್ಲಿ ಶೀಘ್ರದಲ್ಲೇ ಪ್ರಮುಖ ಬದಲಾವಣೆ ಸಾಧ್ಯವಿದೆ ಎಂಬ ಪ್ರಶ್ನೆ ಮತ್ತೊಮ್ಮೆ ತಲೆ ಎತ್ತಿದೆ.
