SK Home Ad
Home ಸುದ್ದಿ ರಾಜ್ಯ ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

0
7

ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಮಾಜಿ ಲೋಕಸಭಾ ಸದಸ್ಯೆ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯೆ ಡಾ. ಸುಧಾ ಯಾದವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ. ಸೋಮವಾರ ರಾಷ್ಟ್ರಪತಿ ಭವನ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ.

ಪ್ರಸ್ತುತ ಕರ್ನಾಟಕದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿರುವ ಥಾವರ್‌ಚಂದ್ ಗೆಹ್ಲೋಟ್ ಅವರ ಸ್ಥಾನಕ್ಕೆ ಸುಧಾ ಯಾದವ್ ನೇಮಕಗೊಂಡಿದ್ದಾರೆ. ಅವರು ಅಧಿಕಾರ ವಹಿಸಿಕೊಳ್ಳುವ ದಿನದಿಂದ ನೇಮಕಾತಿ ಜಾರಿಗೆ ಬರಲಿದೆ.

ಹರಿಯಾಣ ಮೂಲದ ಡಾ. ಸುಧಾ ಯಾದವ್ ಅವರು 1999ರಿಂದ 2004ರವರೆಗೆ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019ರಿಂದ 2022ರವರೆಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ್ದರು. 2022ರ ಆಗಸ್ಟ್‌ನಲ್ಲಿ ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡಿದ್ದರು.

ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪಡೆದಿರುವ ಸುಧಾ ಯಾದವ್, ರಾಜಕೀಯ ಮತ್ತು ಸಂಘಟನಾ ಕ್ಷೇತ್ರಗಳಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ಕರ್ನಾಟಕ ಸೇರಿದಂತೆ ಒಟ್ಟು ಆರು ರಾಜ್ಯಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೊಸ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.