SK Home Ad
Home ಸುದ್ದಿ ರಾಜ್ಯ ರೈತರ ಕಣ್ಣೀರು ಒರೆಸುವ ಬದಲು ಸ್ಟಿಂಗ್ ಆಪರೇಷನ್ ಹಿಂದೆ ಬಿದ್ದ ಸರ್ಕಾರ

ರೈತರ ಕಣ್ಣೀರು ಒರೆಸುವ ಬದಲು ಸ್ಟಿಂಗ್ ಆಪರೇಷನ್ ಹಿಂದೆ ಬಿದ್ದ ಸರ್ಕಾರ

0
4

ಹಾಸನ: ರಾಜ್ಯದಲ್ಲಿ ತೀವ್ರ ಬರಗಾಲದಿಂದ ರೈತರು ಹಾಗೂ ಗ್ರಾಮೀಣ ಜನತೆ ಸಂಕಷ್ಟಕ್ಕೆ ಸಿಲುಕಿದ್ದರೂ, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಬದಲು ರಾಜ್ಯ ಸರ್ಕಾರ ಸ್ಟಿಂಗ್ ಆಪರೇಷನ್‌ನಂತಹ ಅನ್ಯ ವಿಚಾರಗಳಿಗೆ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.

ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬರ ಪರಿಸ್ಥಿತಿ, ಬೆಳೆ ನಷ್ಟ, ಕುಡಿಯುವ ನೀರಿನ ಅಭಾವ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಂತಹ ಗಂಭೀರ ಸಮಸ್ಯೆಗಳತ್ತ ಸರ್ಕಾರ ತಕ್ಷಣ ಗಮನಹರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಸುಮಾರು 45 ಸಾವಿರ ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಕಂದಾಯ ಸಚಿವರೇ ಹೇಳಿರುವುದಾಗಿ ಉಲ್ಲೇಖಿಸಿದ ಕುಮಾರಸ್ವಾಮಿ, ಕುಡಿಯುವ ನೀರಿನ ವ್ಯವಸ್ಥೆಗಾಗಿ 360 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ ಸರ್ಕಾರ ತಿಳಿಸಿದೆ. ಆದರೂ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಮುಂದುವರಿದಿದೆ. ಮಾಧ್ಯಮಗಳಲ್ಲಿ ನಿರಂತರವಾಗಿ ವರದಿಗಳು ಪ್ರಕಟವಾಗುತ್ತಿದ್ದರೂ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಣಾಮಕಾರಿಯಾಗಿ ಮುಂದಾಗುತ್ತಿಲ್ಲ ಎಂದು ಟೀಕಿಸಿದರು.