Home ಸುದ್ದಿ ರಾಜ್ಯ ವಿಧಾನ ಪರಿಷತ್‌ಗೆ ರಮೇಶ್ ಬಾಬು, ಆರತಿ ಕೃಷ್ಣ ಸೇರಿ ನಾಲ್ವರ ನಾಮ ನಿರ್ದೇಶನ

ವಿಧಾನ ಪರಿಷತ್‌ಗೆ ರಮೇಶ್ ಬಾಬು, ಆರತಿ ಕೃಷ್ಣ ಸೇರಿ ನಾಲ್ವರ ನಾಮ ನಿರ್ದೇಶನ

0

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಖಾಲಿ ಇದ್ದ ನಾಲ್ಕು ಸದಸ್ಯ ಸ್ಥಾನಗಳಿಗೆ ನಾಲ್ವರನ್ನು ನಾಮನಿರ್ದೇಶನ ಮಾಡಿ ರಾಜ್ಯ ಸರಕಾರ ಭಾನುವಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಸಚಿವಾಲಯ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌ಬಾಬು, ಅನಿವಾಸಿ ಭಾರತೀಯ ಸಮಿತಿಯ ಅಧ್ಯಕ್ಷೆ ಆರತಿ ಕೃಷ್ಣ, ಎಐಸಿಸಿ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಎಫ್‌.ಎಚ್‌. ಜಕ್ಕಪ್ಪನವರ್, ಹಾಗೂ ಸಿಎಂ ಸಿದ್ದರಾಮಯ್ಯ ಅವರ ಆಪ್ತರೂ ಆಗಿರುವ ಪತ್ರಕರ್ತ ಕೆ. ಶಿವಕುಮಾರ್‌ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ.

ಈ ಹಿಂದೆ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಕಾಂಗ್ರೆಸ್‌ನ ಯು.ಬಿ. ವೆಂಕಟೇಶ್ ಮತ್ತು ಪ್ರಕಾಶ್ ಕೆ. ರಾಥೋಡ್ ಅವರ ಅವಧಿ ಅಕ್ಟೋಬರ್‌ 2024ರಲ್ಲಿ ಮುಕ್ತಾಯಗೊಂಡಿತ್ತು. ಅಲ್ಲದೇ ಜೆಡಿಎಸ್‌ನ ಕೆ.ಎ. ತಿಪ್ಪೇಸ್ವಾಮಿ ಅವರ ಅವಧಿ ಜನವರಿ 2025ರಲ್ಲಿ ಅಂತ್ಯಗೊಂಡಿತ್ತು. ಇನ್ನು ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿ.ಪಿ. ಯೋಗೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅವರ ಸ್ಥಾನವೂ ತೆರವಾಗಿತ್ತು. ಹೀಗಾಗಿ ಈ ನಾಲ್ಕು ಸ್ಥಾನಗಳು ಖಾಲಿಯಾಗಿದ್ದವು.

NO COMMENTS

LEAVE A REPLY

Please enter your comment!
Please enter your name here

Exit mobile version