SK Home Ad
Home ಸುದ್ದಿ ರಾಜ್ಯ ರಾಜ್ಯದ ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಫ್ರೀ

ರಾಜ್ಯದ ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ಫ್ರೀ

0
3

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್‌ ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ಅಧಿಕಾರ ಸ್ವೀಕಾರದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲ ಶಾಲಾ-ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್‌ ಪಾಸ್‌ ಘೋಷಣೆ ಮಾಡಿದ್ದಾರೆ.

ಈ ಮೊದಲು ವಿದ್ಯಾರ್ಥಿನಿಯರಿಗೆ ಮಾತ್ರ ಫ್ರೀ ಬಸ್‌ ಪಾಸ್‌ ನೀಡಲಾಗುತ್ತಿದ್ದು, ಇನ್ನು ಮುಂದೆ ಎಲ್ಲ ವಿದ್ಯಾರ್ಥಿಗಳಿಗೂ ವಿಸ್ತರಣೆ ಮಾಡಲು ನಿರ್ಧರಿಲಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕಾಗಿ ಎಷ್ಟೇ ಹಣ ಖರ್ಚಾದರೂ ಕೂಡ ವಿದ್ಯಾರ್ಥಿಗಳಿಗಾಗಿ ಇದನ್ನು ಜಾರಿ ಮಾಡುತ್ತೇವೆ. ಆದರೆ, ವಿದ್ಯಾರ್ಥಿಗಳು ಇದಕ್ಕಾಗಿ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಎಂದು ಹೇಳಿದರು.