Home Advertisement
Home ಸುದ್ದಿ ರಾಜ್ಯ SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ತೃತೀಯ ಭಾಷೆಗೆ ಗ್ರೇಡ್ ಮಾತ್ರ, ಪಾಸ್-ಫೇಲ್ ಇಲ್ಲ, 625 ಅಂಕದ...

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ತೃತೀಯ ಭಾಷೆಗೆ ಗ್ರೇಡ್ ಮಾತ್ರ, ಪಾಸ್-ಫೇಲ್ ಇಲ್ಲ, 625 ಅಂಕದ ಬದಲು 525ಕ್ಕೆ ಕಡಿತ.

0
77

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 625 ಅಂಕಗಳ ಬದಲಿಗೆ 525 ಅಂಕಗಳಿಗೆ ನಡೆಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದರು. ಈ ವರ್ಷದಿಂದಲೇ ರಾಜ್ಯ ಪಠ್ಯಕ್ರಮದಲ್ಲಿ ತೃತೀಯ ಭಾಷೆಯನ್ನು ಕಡ್ಡಾಯವಾಗಿರಿಸಲಾಗುವುದಿಲ್ಲ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯಬಹುದಾದರೂ, ಆ ಭಾಷೆಗೆ ಹೊಂದಿರುವ 100 ಅಂಕಗಳನ್ನು ಒಟ್ಟು ಫಲಿತಾಂಶದಲ್ಲಿ ಪರಿಗಣಿಸಲಾಗುವುದಿಲ್ಲ. ಇದರ ಬದಲಾಗಿ, ತೃತೀಯ ಭಾಷೆಗೆ ಎ, ಬಿ, ಸಿ, ಡಿ ಎಂಬ ರೀತಿಯಲ್ಲಿ ಗ್ರೇಡ್ ನೀಡಲಾಗುತ್ತದೆ.

ಇದಲ್ಲದೆ, ತೃತೀಯ ಭಾಷೆಯಲ್ಲಿ ಪಾಸ್ ಅಥವಾ ಫೇಲ್ ಎಂಬ ವ್ಯವಸ್ಥೆ ಇರುವುದಿಲ್ಲ. ಹಿಂದಿ ಭಾಷೆಯನ್ನೂ ಕಡ್ಡಾಯವಾಗಿರಿಸಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಈ ನಿರ್ಧಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

ಈ ಹೊಸ ನಿಯಮವನ್ನು ಇದೇ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದಲೇ ಜಾರಿಗೆ ತರಲಾಗುತ್ತಿದ್ದು, ಇದರ ಕುರಿತು ಅಧಿಕೃತ ಆದೇಶವನ್ನು ಇಂದು ಸಂಜೆ ಒಳಗಾಗಿ ಹೊರಡಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಉರ್ದು ಮಾಧ್ಯಮ ಶಾಲೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯಾಗಿ ಬೋಧಿಸುವ ವ್ಯವಸ್ಥೆ ಇದ್ದು, ಕನ್ನಡಕ್ಕೆ ಯಾವುದೇ ಧಕ್ಕೆ ಆಗದಂತೆ ವಿಶೇಷ ನಿಯಮ ರೂಪಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಇನ್ನು, ಸಿಬಿಎಸ್‌ಇ ಮತ್ತು ಐಸಿಎಸ್‌ಇ ಪಠ್ಯಕ್ರಮಗಳು ರಾಜ್ಯ ಪಠ್ಯಕ್ರಮಕ್ಕೆ ಸೇರದಿರುವುದರಿಂದ, ಈ ಹೊಸ ನಿಯಮಗಳು ಆ ಶಾಲೆಗಳಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.